
ಸುಳ್ಯದ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ ೫೮ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ನಡೆಯಿತು.
ಸೆ ೧೮ರ ತನಕ ವಿವಿಧ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಗಣಪತಿ ಹವನ, ಮೂರ್ತಿ ಪ್ರತಿಷ್ಠೆ ನಡೆಯಿತು.ಉತ್ಸವದ ಉದ್ಘಾಟನೆಯನ್ನು ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ನೆರವೇರಿಸಿದರು. ಸಿದ್ದಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಕೆ.ಎಸ್, ಅಧ್ಯಕ್ಷತೆ ವಹಿಸಿದ್ದರು. ಚೆನ್ನಕೇಶವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು. ಬಳಿಕ ೫ನೇ ತರಗತಿಯಿಂದ ೮ನೇ ತರಗತಿವರೆಗಿನ ಮಕ್ಕಳ ತಂಡಕ್ಕೆ ಭಜನಾ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳ ಮತ್ತು ಭಜನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ಭರತ್ ಪಿ.ಯು ಹಾಗು ಶಶಿಧರ ಎಂ.ಜೆ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭರತ್ ಪಿಂಡಿಮನೆ ವಂದಿಸಿದರು. ಸೋಮನಾಥ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕೆ.ಆರ್. ಗೋಪಾಲಕೃಷ್ಣ ಬಳಗ ಸುಳ್ಯ ಇವರಿಂದ ದೇವಾಭಿಮಾನ ದೇಶಾಭಿಮಾನ ಗಾನಾಮೃತ ನಡೆಯಿತು.































