Home ಜಿಲ್ಲೆ ಬರ ಘೋಷಣೆ ಸಾಧ್ಯತೆ

ಬರ ಘೋಷಣೆ ಸಾಧ್ಯತೆ


ಧಾರವಾಡ,ಸೆ.೧೯:ಧಾರವಾಡ ತಾಲ್ಲೂಕಿನ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಹಾಗೂ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿಯವರು ಸದಾ ಬದ್ಧರಾಗಿದ್ದುಪ್ರಸ್ತುತ ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮುಂಬರುವ ವಾರದೊಳಗೆ ಬರ ಘೋಷಣೆಯಾಗುವ ಸಾಧ್ಯತೆಯಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಹೊಸವಾಳ, ವೀರಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸರ್ಕಾರ ಪಡೆದುಕೊಂಡಿರುವ ರೈತರ ಜಮೀನುಗಳ ಗಡಿ ಗುರುತಿಸುವಿಕೆ ಹಾಗೂ ಭೂಮಾಪನ ಕಾರ್ಯಕ್ಕೆ ಸಂಬAಧಿಸಿದAತೆ ಈಗಾಗಲೇ ಂಆಐಖ (ಭೂಮಾಪನ ಇಲಾಖೆ) ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.


ರೈತರ ಜಮೀನುಗಳ ಗಡಿ ಗುರುತಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ಅನ್ಯಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು. ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗದವರು ಹಾಗೂ ದುರ್ಬಲ ವರ್ಗದ ಕುಟುಂಬಗಳಿಗೆ ಆರ್ಥಿಕವಾಗಿ ಆಸರೆಯಾಗಿವೆ. ಸಾವಿರಾರು ಕುಟುಂಬಗಳು ಈ ಯೋಜನೆಗಳ ಪ್ರಯೋಜನ ಪಡೆದುಕೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯಗಳು ನಿರಂತರವಾಗಿ ತಲುಪುವಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಧಾರವಾಡ ಮಹಾನಗರ ಪಾಲಿಕೆ ರಚನೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.


ರಾಜಕೀಯ ಲಾಭಕ್ಕಾಗಿ ಹಾಗೂ ಪ್ರಚಾರಕ್ಕಾಗಿ ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಜೆಪಿ ಮುಖಂಡರು ಬಿಟ್ಟು, ಧಾರವಾಡದ ಅಭಿವೃದ್ಧಿ ಹಾಗೂ ಜನರ ಹಿತದ ವಿಚಾರದಲ್ಲಿ ರಚನಾತ್ಮಕವಾಗಿ ಸಹಕರಿಸಬೇಕು ಎಂದು ಅವರು ಹೇಳಿದರು.