
ಕಲಬುರಗಿ: ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ಸೆಡಂ ರಸ್ತೆಯಲ್ಲಿರುವ ಒಖಒಅ ಸ್ಯಾಕ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ SSಐಅ ಮತ್ತು PUಅ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಅಫಜಲಪುರ ಶಾಸಕ ಎಂ.ವೈ. ಪಾಟೀಲ ಮಾತನಾಡಿ, ದೇಶದ ಭಾವಿ ಪ್ರಜೆಗಳನ್ನು ಸಿದ್ಧಗೊಳಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವನ ನಡೆಸಲು ಅಗತ್ಯವಾದ ಮಾರ್ಗದರ್ಶನವನ್ನು ಶಿಕ್ಷಕರು ನೀಡುತ್ತಿದ್ದಾರೆ ಎಂದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೂಲಿ ಕಟ್ಟಿಮನಿ ಹಿರೇಮಠ ಪಾಳಾದ ಪಟ್ಟಾಧ್ಯಕ್ಷರಾದ ಪೂಜ್ಯ ಶ್ರೀ ಷ.ಬ್ರ. ಡಾ. ಗುರುಮೂರ್ತಿ ಶಿವಾಚಾರ್ಯರು ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಡಾ. ಕೆ. ಹಣಮಂತಪ್ಪ, ರಾಜ್ಯ ಅಧ್ಯಕ್ಷ ಶಿವಾನಂದ ಹಿರೇಕುರುಬರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ, ಅಫಜಲಪುರ ಶಾಸಕ ಎಂ.ವೈ. ಪಾಟೀಲ ಪಾಲ್ಗೊಂಡಿದ್ದರು. ಜಂಟಿ ಕಾರ್ಯದರ್ಶಿ ಕಲ್ಯಾಣರಾವ ಬಿರಾದಾರ, ಸಂಘಟನಾ ಕಾರ್ಯದರ್ಶಿ ಪ್ರೇಮಸಿಂಗ್ ಚವ್ಹಾಣ, ಜಿಲ್ಲಾ ಗೌರವಾಧ್ಯಕ್ಷ ಹಣಮಂತ ಮರಡಿ, ಕಾರ್ಯಾಧ್ಯಕ್ಷ ಡಾ. ನಾಗಭೂಷಣ ವಿ. ಮಹಾಂತಿನಮಠ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ ಓಪ್ಪಾರಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಅಧ್ಯಕ್ಷ ಭಾನುಕುಮಾರ ಗಿರೇಗೋಳ ಅಧ್ಯಕ್ಷತೆ ವಹಿಸಿದ್ದರು.
ಸಾಧಕ ಶಿಕ್ಷಕರಿಗೆ ವಿಶೇಷ ಸನ್ಮಾನ
ಕರ್ನಾಟಕ ರಾಜ್ಯ ರಾಜೀವಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಇಸಾಮುದ್ದೀನ್ ಖಾಜಿ ಹಾಗೂ ಮುತ್ತಣ್ಣ ಕುಂಬಾರ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಪೆÇದ್ದಾರ, ರಾಷ್ಟ್ರೀಯ ಸಲಹೆಗಾರ ಡಾ. ಪ್ರೇಮಸಿಂಗ್ ಚವ್ಹಾಣ ಹಾಗೂ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಿದ್ದಣ್ಣ ಹೂಗಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. SSಐಅ ಮತ್ತು PUಅಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ವಿವಿಧ ಶಿಕ್ಷಕ ಸಂಘಟನೆಗಳ ಮುಖಂಡರು, ಶಿಕ್ಷಕರು, ನಿವೃತ್ತ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶ್ರೀ ರೆವಣಸಿದ್ದಯ್ಯ ವೈದ್ಯ ಅವರು ಸಮಸ್ತ ಶಿಕ್ಷಕರಿಗೆ ಸ್ವಾಗತ ಕೋರಿದರು.































