
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ವಾರ್ಡ ಸಂಖ್ಯೆ 52 ರಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮತ್ತು ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಇಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಶೋಭಾ ಗುರುರಾಜ ದೇಸಾಯಿ ಅವರ ನೇತೃತ್ವದಲ್ಲಿ 52 ನೇ ವಾರ್ಡ್ ವಿವಿಧ ಕಾಲೋನಿಯ ನಾಗರಿಕರು ಖಾಲಿ ಕೊಡಗಳೊಂದಿಗೆ ಧರಣಿ ನಡೆಸಿದರು. ನಂತರ ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.






















