
ಕೆಜಿಎಫ್., ಸೆ.೨೫;ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (ಓಇ-೭) ರಸ್ತೆಯಲ್ಲಿ ಸೆ. ೨೪, ೨೦೨೬ ರಂದು ಮಧ್ಯಾಹ್ನ ೧೨.೪೦ಕ್ಕೆ ನಡೆದ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ನಾಲ್ವರು ಮೃತಪಟ್ಟಿದ್ದಾರೆ.
ಮಹೇಂದ್ರ ಕಂಪನಿಯ ಖಾಸಗಿ ಕಾರಿನಲ್ಲಿ ಪುಣೆಯಿಂದ ತಿರುಪತಿಗೆ ತೆರಳುತ್ತಿದ್ದಾಗ, ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ತುರ್ತು ಚಿಕಿತ್ಸೆಗೆ ಕರೆದೊಯ್ಯುವ ಮುನ್ನ, ನವನಾಥ್ ಗಾಯಕ್‌ವಾಡ್ (೩೪ ವರ್ಷ), ಕಿರಣ್ (೩೬ ವರ್ಷ) ಮತ್ತು ಚಾಲಕ ಪವರ್ ವಿಶ್ವನಾಥ್ ದಿಗಂಬರ್ (೩೪ ವರ್ಷ) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಶಾಲ್ (೪೬ ವರ್ಷ) ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಸೋಮನಾಥ್ ಎಂಬ ವ್ಯಕ್ತಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿಯೂ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕೆಜಿಎಫ್‌ನ ಪೊಲೀಸ್ ಅಧೀಕ್ಷಕರಾದ ಶಿವಾಂಶು ರಜಪೂತ್, ಐ.ಪಿ.ಎಸ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





















