Home ಜಿಲ್ಲೆ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರೊ. ನಾಗರಾಜ ಎ

ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರೊ. ನಾಗರಾಜ ಎ

ವಿಜಯಪುರ, ಸೆ. 25: ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿಯೇ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಪೆÇ್ರ. ನಾಗರಾಜ ಎ. ಕರೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) 1969ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥವಾಗಿ ಡಾ. ವಿ.ಕೆ.ಆರ್.ವಿ. ರಾವ್ ಅವರಿಂದ ಸ್ಥಾಪಿಸಲಾಯಿತು. ಸಾಮಾಜಿಕ ಜಾಗೃತಿ, ಸಮುದಾಯ ಸೇವೆ, ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಗೆ ಎನ್‍ಎಸ್‍ಎಸ್ ಆದ್ಯತೆ ನೀಡುತ್ತದೆ. ರಾಷ್ಟ್ರೀಯ ಭಾವೈಕ್ಯತೆ, ಶಾಂತಿ ಹಾಗೂ ನಿಸ್ವಾರ್ಥ ಸೇವೆಯ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
ಎನ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಪ್ರಜಾಪ್ರಭುತ್ವ ಮೌಲ್ಯಗಳು, ಪ್ರಾಮಾಣಿಕತೆ, ಪರಸ್ಪರ ಸ್ನೇಹ ಹಾಗೂ ಸೇವಾ ಮನೋಭಾವ ಬೆಳೆಯುತ್ತದೆ. ಉತ್ತಮ ಮಾನವೀಯ, ಕೌಟುಂಬಿಕ, ನೈತಿಕ ಹಾಗೂ ರಾಷ್ಟ್ರೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸೌಹಾರ್ದಯುತ ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ರಾಕೇಶ್ ದರ್ಬಾರ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯ ಗಿರೀಶ್ ಮುನೂರು, ಎನ್‍ಎಸ್‍ಎಸ್ ಬೆಳೆದು ಬಂದ ಹಾದಿ ಹಾಗೂ ಅದರ ಸೇವಾ ಉದ್ದೇಶಗಳನ್ನು ವಿವರಿಸಿ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಸಂಯೋಜನಾಧಿಕಾರಿ ರಾಜು ಕಪಾಲಿ ಮಾತನಾಡಿ, ಯುವ ಸಮುದಾಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ಗ್ರಾಮೀಣ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಗ್ರಾಮೀಣ ಸಾಕ್ಷರತೆ, ಆರೋಗ್ಯ, ನೈರ್ಮಲ್ಯ, ಸಾಮಾಜಿಕ ಕಳಕಳಿ, ಭ್ರಾತೃತ್ವ, ಸೋದರತ್ವ ಹಾಗೂ ರಾಷ್ಟ್ರೀಯ ಭಾವೈಕ್ಯತೆಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿವೇದಿತಾ ಬಿರಾದರ್ ಕಾರ್ಯಕ್ರಮ ನಿರೂಪಿಸಿದರು. ಪ್ರೀತಿ ಮಾದರ ಸ್ವಾಗತಿಸಿದರು. ಮಹೇಶ ವಂದಿಸಿದರು.