
ಅಥಣಿ : ಸಹಕಾರ ಸಚಿವರಾದ ಲಕ್ಷ್ಮಣ ಸವದಿಯವರ ಸೂಚನೆ ಮೇರೆಗೆ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಭೂಮಿ ಪೂಜೆ ನೆರವೇರಿಸಿ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಸುದ್ದಿಗಾರರೊಂದಿಗೆ ಮಾತನಾಡಿ ಬಹುದಿನಗಳಿಂದ ಈ ಮುಖ್ಯ ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಸಾರ್ವಜನಿಕರು ಮನವಿ ಮಾಡುತ್ತಿದ್ದ
ಹಿನ್ನೆಲೆಯಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸೂಚನೆಯಂತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆ ಅಭಿವೃದ್ಧಿಯಿಂದ ವಾಹನ ಸಂಚಾರ ಸುಗಮವಾಗುವುದರ ಜೊತೆಗೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಹಾಗೂ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಸಂಬAಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು.
ಸಾರ್ವಜನಿಕರ ನಿರೀಕ್ಷೆಯಂತೆ ಕಾಮಗಾರಿ ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದAತೆ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಥಣಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣ ಬದ್ಧರಾಗಿದ್ದು. ನೀರಾವರಿ, ಶಿಕ್ಷಣ, ಭಾಗೀರಥಿ ನಾಲಾ. ಕೆರೆ ತುಂಬುವ ಯೋಜನೆ. ಜೋಡು ಕೆರೆ ಅಭಿವೃದ್ಧಿ ಹಾಗೂ ಎಲ್ಲ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಕೂಡ ಎಲ್ಲಾ ವಾರ್ಡ್ ಗಳ ಸದಸ್ಯರು ಒಟ್ಟಾಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮಲ್ಲೇಶ ಹುದ್ದಾರ, ಸೈಯ್ಯದಅಮೀನ ಗದ್ಯಾಳ, ರಾಜಶೇಖರ ಗುಡೋಡಗಿ, ವಿಲೀನರಾಜ ಯಳಮೇಲ್ಲೆ, ರಮೇಶ ಪವಾರ, ವೆಂಕಟೇಶ ದೇಶಪಾಂಡೆ, ಬಾಬು ಖೇಮಲಾಪೂರ, ಬಸವರಾಜ ಹಳ್ಳದಮಳ, ಗುತ್ತಿಗೆದಾರ ರಾಜು ಆಲಬಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.






















