ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವು ಖಂಡಿಸಿ,ಪ್ರತಿಮೆ ಮರುಸ್ಥಾಪನೆಗೆ ಆಗ್ರಹಿಸಿ ಮಂಗಳವಾರ ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ಸೂಪರ್ ಮಾರುಕಟ್ಟೆ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.ವಿವಿಧ ಕಡೆಗಳಿಂದ ಆಗಮಿಸಿದ ಸಹಸ್ರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡರು.