ಕಲಬುರಗಿ: ದೇಶದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿ ಎಸ್‍ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಇಂದು ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದಿಂದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ಸಲೀಂ ಅಹಮದ್ ಚಿತಾಪುರ,ಡಾ. ಮಹೇಶಕುಮಾರ ರಾಠೋಡ, ಅಫಜಲ್ ಮಹಿಮೂದ,ಮಹೇಶ ಎಸ್ .ಬಿ ಸೇರಿದಂತೆ ಹಲವರು ಪಾಲ್ಗೊಂಡರು.