
ಬೀದರ್: ಸಮಾಜದ ಸುರಕ್ಷತೆ ಹಾಗೂ ಜನರ ಆರೋಗ್ಯ ಸಾರ್ವಜನಿಕ ಜೀವನದಲ್ಲಿ ಅತ್ಯಂತ ಮಹತ್ವದ ಸ್ಥಾನ ಹೊಂದಿವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪೆÇಲೀಸ್ ಇಲಾಖೆ ಹಾಗೂ ಜೀವ ರಕ್ಷಿಸುವ ವೈದ್ಯಕೀಯ ಕ್ಷೇತ್ರ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಆರೋಗ್ಯ ಮತ್ತು ಸುರಕ್ಷತೆಯನ್ನು ಬಲಪಡಿಸುತ್ತವೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದರು.
ನಗರದ ಗುದಗೆ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿದ್ದ ರೀಲ್ಸ್ ಸ್ಪರ್ಧೆ ಹಾಗೂ ಹೃದಯದ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೆÇಲೀಸ್ ಇಲಾಖೆ ಮತ್ತು ವೈದ್ಯಕೀಯ ಕ್ಷೇತ್ರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ರಸ್ತೆ ಅಪಘಾತಗಳು, ಹಲ್ಲೆ ಪ್ರಕರಣಗಳು ಹಾಗೂ ವಿವಿಧ ತುರ್ತು ಸಂದರ್ಭಗಳಲ್ಲಿ ಪೆÇಲೀಸರು ಮತ್ತು ವೈದ್ಯರು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ. ಪೆÇಲೀಸರು ಅಪಘಾತ ಅಥವಾ ಘಟನೆ ನಡೆದ ಸ್ಥಳದಲ್ಲಿ ತ್ವರಿತವಾಗಿ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುತ್ತಾರೆ. ವೈದ್ಯರು ತಕ್ಷಣ ಚಿಕಿತ್ಸೆ ನೀಡಿ ಜೀವ ಉಳಿಸುವ ಕಾರ್ಯ ಮಾಡುತ್ತಾರೆ. ಅಪರಾಧ ಪ್ರಕರಣಗಳ ತನಿಖೆಯಲ್ಲಿಯೂ ವೈದ್ಯಕೀಯ ವರದಿಗಳು ಹಾಗೂ ಮರಣೋತ್ತರ ಪರೀಕ್ಷೆಯ ವರದಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಎರಡೂ ಕ್ಷೇತ್ರಗಳ ನಡುವೆ ಉತ್ತಮ ಸಮನ್ವಯ ಮತ್ತು ಪರಸ್ಪರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಯುವ ಹೃದಯ ತಜ್ಞ ಡಾ. ನಿತಿನ್ ಗುದಗೆ ಮಾತನಾಡಿ, ಇಂದಿನ ಜೀವನಶೈಲಿ, ಮಾನಸಿಕ ಒತ್ತಡ, ಅಸಮರ್ಪಕ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಹಾಗೂ ಧೂಮಪಾನದಂತಹ ಚಟಗಳು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ಯುವಜನರು ಸೇರಿದಂತೆ ಪ್ರತಿಯೊಬ್ಬರೂ ಹೃದಯದ ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು ಎಂದು ಅವರು ಹೇಳಿದರು.
ಎದೆನೋವು, ಉಸಿರಾಟದ ತೊಂದರೆ, ಅತಿಯಾದ ಬೆವರು, ತಲೆಸುತ್ತು ಹಾಗೂ ಅಸಹಜ ಹೃದಯ ಬಡಿತದಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ನಿಯಮಿತ ಆರೋಗ್ಯ ತಪಾಸಣೆ, ಸಮತೋಲಿತ ಆಹಾರ, ದೈಹಿಕ ವ್ಯಾಯಾಮ ಹಾಗೂ ಒತ್ತಡ ನಿಯಂತ್ರಣದ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಹೃದಯ ತಜ್ಞ ಹಾಗೂ ಗುದಗೆ ಆಸ್ಪತ್ರೆಯ ಅಧ್ಯಕ್ಷ ಡಾ. ಚಂದ್ರಕಾಂತ ಗುದಗೆ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ನಿರಂತರ ಅಧ್ಯಯನ, ಕಠಿಣ ಪರಿಶ್ರಮ, ಶಿಸ್ತು ಹಾಗೂ ಸೇವಾ ಮನೋಭಾವ ಅಗತ್ಯ ವೈದ್ಯಕೀಯ ಶಿಕ್ಷಣವು ದೀರ್ಘಕಾಲದ ಅಧ್ಯಯನ ಮತ್ತು ತರಬೇತಿಯನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಆರಂಭದಿಂದಲೇ ಸ್ಪಷ್ಟ ಗುರಿ ಹೊಂದಿ ಶ್ರಮಿಸಬೇಕು. ವೈದ್ಯರಾಗುವುದು ಕೇವಲ ಉದ್ಯೋಗವಲ್ಲ; ಜನರ ಜೀವ ಮತ್ತು ಆರೋಗ್ಯದ ಜವಾಬ್ದಾರಿ ಹೊರುವ ಮಹತ್ತರ ಸೇವೆಯಾಗಿದೆ ಎಂಬ ಅರಿವು ಪ್ರತಿಯೊಬ್ಬ ವೈದ್ಯಕೀಯ ವಿದ್ಯಾರ್ಥಿಯಲ್ಲಿರಬೇಕು ಎಂದು ಡಾ. ಚಂದ್ರಕಾಂತ ಗುದಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಸಚಿನ್ ಗುದಗೆ, ಡಾ. ಪ್ರಶಾಂತ ಅಲ್ಲೆ, ಡಾ. ಸುಕಾನಂದ, ಡಾ. ವಿಶ್ವನಾಥ ಪಾಟೀಲ್, ಡಾ. ಆನಂದರಾವ್, ಡಾ. ಮಹೇಶ ತೊಂಡಾರೆ ಹಾಗೂ ಗುದಗೆ ಆಸ್ಪತ್ರೆಯ ಎ.ಕೆ. ಮಿಶ್ರಾ ಉಪಸ್ಥಿತರಿದ್ದರು.
ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿದ್ದ ರೀಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಗುದಗೆ ಆಸ್ಪತ್ರೆಯ ವತಿಯಿಂದ ಪ್ರಶಸ್ತಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.






















