
ಕಲಬುರಗಿ,ಅ.5-ಚಾಕುವಿನಿಂದ ಇರಿದು ಪಂಪ್ ಆಪರೇಟರ್ ಒಬ್ಬರನ್ನು ಹತ್ಯೆ ಮಾಡಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತರನ್ನು ಮಾಡಿಯಾಳ ಗ್ರಾಮ ಪಂಚಾಯಿತಿಯಲ್ಲಿ ಪಂಪ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂತೋಷ ಹಣಮಂತ ನಿಂಬಾಳ (37) ಎಂದು ಗುರುತಿಸಲಾಗಿದೆ.
ಹಳೆಯ ವೈಷಮ್ಯವೇ ಸಂತೋಷ ಅವರ ಕೊಲೆಗೆ ಕಾರಣವಿರಬಹುದು ಎಂದು ಪೆÇಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ನಿಂಬರ್ಗಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.























