Home ಜಿಲ್ಲೆ ಬೆಂಗಳೂರು ಜೀವನಶೈಲಿ ಬದಲಾವಣೆಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಳ: ಡಾ. ನಟರಾಜ ಶೆಟ್ಟಿ

ಜೀವನಶೈಲಿ ಬದಲಾವಣೆಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಳ: ಡಾ. ನಟರಾಜ ಶೆಟ್ಟಿ

ಕನಕಪುರ, ಅ.೬- ಬದಲಾಗುತ್ತಿರುವ ಜೀವನಶೈಲಿ, ಅಸಮರ್ಪಕ ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳ ಞoಡಿs ಸಮಯದಲ್ಲಿ ಕಾಣುವುದು ಮತ್ತು ಆರೋಗ್ಯದ ನಿರ್ಲಕ್ಷತೆಯಿಂದಾಗಿ ವಿವಿಧ ಕಾಯಿಲೆಗಳು ಜನರಲ್ಲಿವೆ. ಆದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಆರೋಗ್ಯ ಜಾಗೃತಿ ನಿರ್ದಿಷ್ಟವಾಗುತ್ತಿದೆ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ. ಹೆಚ್.ಎಸ್. ನಟರಾಜ ಶೆಟ್ಟಿ ಹೇಳಿದ್ದಾರೆ.


ನಗದ ರೈಸ್ ಮಿಲ್ ಬಳಿಯ ಡಿ.ಕೆ. ಗಾರ್ಡೇನಿಯ ಆವರಣದಲ್ಲಿ ಶ್ರೀ ನಟರಾಜ ಬಲಿಜ ಕಲಾಸಂಗಮದ ಎರಡನೇ ವಾರ್ಷಿಕೋತ್ಸವ ಮತ್ತು ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬುದ್ಧ ಕಲಾ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.


ಹಿಂದಿನ ಕಾಲದಲ್ಲಿ ಗ್ರಾಮೀಣ ಭಾಗದ ಜನರು ಕೃಷಿ ಮತ್ತು ಇತರೆ ದೈಹಿಕ ಶ್ರಮದ ಕೆಲಸಗಳಲ್ಲಿ ತೊಡಗಿಸಿಕೊಂಡು ಆರೋಗ್ಯಕರ ಜೀವನ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಬದಲಾವಣೆಯಾಗಿದ್ದು, ದೈಹಿಕ ಚಟುವಟಿಕೆ ಕಡಿಮೆಯಾಗಿ, ಮೊಬೈಲ್ ಮತ್ತು ಇತರೆ ಡಿಜಿಟಲ್ ಸಾಧನಗಳ ಬಳಕೆ ಹೆಚ್ಚುತ್ತಿದೆ. ಇದರ ಪರಿಣಾಮ ಮಕ್ಕಳಿಂದ ಹಿಡಿದು ಮಯಸ್ಕರವರೆಗೂ ದೋಷಬಾಧಿತವಾಗಲು ಸಾಧ್ಯತೆ ಇದೆ ಎಂದು ಎಚ್ಚರಿಸಿದರು.


ಅಧಿಕ ರಕ್ತದೊತ್ತಡ ಮತ್ತು ಮಧುಮೇಹವು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳನ್ನು ತೋರಿಸದೇ ದೇಹದ ಮೇಲೆ ಪರಿಣಾಮ ಬೀರುವುದರಿಂದ ಅವುಗಳನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತಿದೆ. ಪ್ರತಿಯೊಬ್ಬರೂ ನಿಯಮಿತವಾಗಿಯೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳ ಕುರಿತೂ ಸಾರ್ವಜನಿಕರು ಅರಿವು ಹೊಂದಿರಬೇಕು ಎಂದು ಸಲಹೆ ನೀಡಿದರು.


ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ವ್ಯಾಯಾಮ, ಸಮತೋಲನ ಆಹಾರ ಮತ್ತು ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವುದು ಪೋಷಕರ ಕರ್ತವ್ಯವಾಗಿದೆ ಎಂದರು.


ಸಮಾಜದ ಒಳಿತಿಗಾಗಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳನ್ನು ಮಕ್ಕಳು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು. ಅನಾಥಾಶ್ರಮಗಳ ಸಂಖ್ಯೆ ಹೆಚ್ಚಳವು ಕಳವಳಕಾರಿ ಬೆಳವಣಿಗೆಯಾಗಿದ್ದು, ಕುಟುಂಬ ವ್ಯವಸ್ಥೆ ಮತ್ತು ಮಾನವೀಯ ಮೌಲ್ಯಗಳನ್ನು ಉಳಿಸುವ ಅಗತ್ಯವಿದೆ ಎಂದು ಡಾ. ನಟರಾಜ ಶೆಟ್ಟಿ ಹೇಳಿದರು.


ಪತ್ರಕರ್ತ ಶ್ರವಣ್ ಲಕ್ಷ್ಮಣ್ ಮತ್ತು ಆಪ್ತ ಸೇವಾ ಟ್ರಸ್ಟ್ ಅಧ್ಯಕ್ಷ ಜಿಗಣಿ ರಾಜಶೇಖರ್ ಮಾತನಾಡಿ, ಸಮಾಜ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸುವ ಮೂಲಕ ಇತರರಲ್ಲಿಯೂ ಸೇವಾ ಮನೋಭಾವ ಬೆಳೆಸುವುದು ಸಾಧ್ಯ. ಆರೋಗ್ಯ, ಮಾನವೀಯತೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು ಎಂದರು.


ಕಾರ್ಯಕ್ರಮದಲ್ಲಿ ಶ್ರೀ ನಟರಾಜ ಬಲಿಜ ಕಲಾಸಂಗಮದ ಪ್ರಧಾನ ಕಾರ್ಯದರ್ಶಿ ಆರ್. ಇಂದುಮತಿ ಮುಕುಂದ, ಸಂಸ್ಥಾಪಕ ಅಧ್ಯಕ್ಷರಾದ ಜಿ.ಎಲ್. ಸಂಪಂಗಿ ರಾಮುಲು, ಉಪಾಧ್ಯಕ್ಷರಾದ ರೂಪ, ಅಂಬಿಕಾ, ವೆಂಕಟೇಶ್, ಸಾಹಿತಿ ರಾಜೇಶ್ವರಿ, ಉಪಸ್ಥಿತರಿದ್ದರು.