Home ಜಿಲ್ಲೆ ಬೆಂಗಳೂರು ಎಸ್‌ಐಆರ್ ಹಗರಣ ನಿಷ್ಪಕ್ಷ ತನಿಖೆಗೆ ಮನವಿ

ಎಸ್‌ಐಆರ್ ಹಗರಣ ನಿಷ್ಪಕ್ಷ ತನಿಖೆಗೆ ಮನವಿ

ಬೆಂಗಳೂರು, ಅ. ೭- ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಅವಕಾಶ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಆದ್ದರಿಂದ, ತಾವುಗಳು ಈ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಈoಡಿm ಓo-೭ ಮೂಲಕ ಸಲ್ಲಿಸಲಾಗಿರುವ ಅರ್ಜಿಗಳನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ಅರ್ಹ ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲು ಅವಕಾಶ ಕಲ್ಪಿಸದಂತೆ ಕ್ರಮ ಕೈಗೊಳ್ಳಲು ತಾವು ಸೂಚಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಬಿಜೆಪಿಯ ಪ್ರಯತ್ನವನ್ನ ತಡೆದು ನೈಜ್ಯ ಮತದಾರರಿಗೆ ರಕ್ಷಣೆ ನೀಡಬೇಕು ಪ್ರತಿಯೊಬ್ಬ ನಾಗರೀಕರಿಗೂ ಮತದಾನ ಮಾಡುವ ಹಕ್ಕನ್ನ ಒದಗಿಸಿ ಕೊಡಬೇಕೆಂದು ಈಗಾಗಲೇ ಮುಖ್ಯ ಚುನಾವಣಾ ಅಧಿಕಾರಿಯನ್ನು ಕಾಂಗ್ರೆಸ್ ಪಕ್ಷದವರು ಅನೇಕ ಬಾರಿ ಭೇಟಿ ಮಾಡಿ ಮತದಾರರ ಹಕ್ಕನ್ನ ರಕ್ಷಿಸಿ ಎಂದು ವಿನಂತಿಸಿಕೊಳ್ಳಲಾಗುತ್ತಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ ಬಿಜೆಪಿ ನಾಯಕರು ಫಾರಂ-೭ ಮೂಲಕ ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಮತದಾರರ ಹೆಸರುಗಳನ್ನು ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೂಲಭೂತ ಮತದಾನದ ಹಕ್ಕಿಗೆ ಧಕ್ಕೆ ತರುವಂತಹ ಯಕೃತ್ಯವನ್ನು ಬಿಜೆಪಿ ಪಕ್ಷ ಮಾಡುತ್ತಿದೆ.

 ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮೊದಲು ಸಂಬಂಧಪಟ್ಟ ಮತದಾರರಿಗೆ ಸಮರ್ಪಕವಾಗಿ ಮಾಹಿತಿ ನೀಡಿ, ಅವರಿಗೆ ತಮ್ಮ ಆಕ್ಷೇಪಣೆ ಅಥವಾ ಸ್ಪಷ್ಟೀಕರಣವನ್ನು ಸಲ್ಲಿಸಲು ಸೂಕ್ತ ಅವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು.

ಈಗಾಗಲೇ ದೇಶ ವ್ಯಾಪ್ತಿ ಚುನಾವಣೆ ಅಕ್ರಮದ ಬಗ್ಗೆ ಪ್ರತಿ ನಾಗರಿಕರು ಹೋರಾಟವನ್ನು ಪ್ರಾರಂಭಿಸಿದ್ದಾರೆ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನ ವಜಾಗೊಳಿಸಲು ದೇಶ ವ್ಯಾಪ್ತಿ ಆಂದೋಲನ ಪ್ರಾರಂಭವಾಗಿದೆ ಈ ಗಂಭೀರ ಆರೋಪಗಳನ್ನು ಪರಿಗಣಿಸಿ, ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳಿಂದ ವರದಿ ಪಡೆದು, ಅರ್ಹ ಮತದಾರರ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ರವರು, ಕಾಂಗ್ರೆಸ್ ಮುಖಂಡರಾದ ಮಲ್ಲೇಶ್, ಲಕ್ಷ್ಮೀನಾರಾಯಾಣ್, ಸೋಮಶೇಖರ್ , ಉಮೇಶ್ ಕುಶಾಲ್ ಹರುವೇಗೌಡ, ರಂಜೀತ್ ಕುಮಾರ್, ಸಾಯಿನವೀನ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.