Home ಮುಖಪುಟ ಸುದ್ದಿ ದೀಪ್ಕೆ, ಸೌರವ್, ರಾಂಕಾ, ರಾಠಿ ಬಿಡುಗಡೆ

ದೀಪ್ಕೆ, ಸೌರವ್, ರಾಂಕಾ, ರಾಠಿ ಬಿಡುಗಡೆ

ನವದೆಹಲಿ, ಅ.೧೧: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಕ್‌ರೋಚ್ ಜನತಾ ಪಕ್ಷದ(ಸಿಜೆಪಿ) ಮುಖಂಡರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಹಾಗೂ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಇಂದು ಬಿಡುಗಡೆ ಗೊಳಿಸಿದ್ದಾರೆ.


ನಿನ್ನೆ ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದಿಂದಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ದೆಹಲಿ ಕಂಟೋನ್ಮೆಂಟ್‌ನ ಹೆಚ್ಚುವರಿ ನಗರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.


ಮುಂದಿನ ಒಂದು ವರ್ಷ ಶಾಂತಿ ಕಾಪಾಡುವ ಷರತ್ತಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಿಜೆಪಿಯ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾಸಿಂಗ್ ತಿಳಿಸಿದ್ದಾರೆ.


೫೦ ಸಾವಿರ ಮೊತ್ತದ ಜಾಮೀನು ಬಾಂಡ್ ಮತ್ತು ಭದ್ರತಾ ಬಾಂಡ್ ಸಲ್ಲಿಸಿದ ಬಳಿಕ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ ಕೆಲವೇ ನಿಮಿಷಗಳಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ ದೆಹಲಿ ಪೊಲೀಸರ ತಂಡ ವಿಮಾನದೊಳಗೆ ಪ್ರವೇಶಿಸಿ ಮೂವರನ್ನು ವಶಕ್ಕೆ ಪಡೆದಿತ್ತು. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಘಟನೆಯನ್ನು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಿದ್ದರು. ದೀಪ್ಕೆ ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಬಂಧನಕ್ಕೊಳಗಾಗಲು ತಾವೇ ದೆಹಲಿಗೆ ಬಂದಿರುವುದಾಗಿ ತಿಳಿಸಿದ್ದರು.


ಸಿಜೆಪಿಯ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, ಮೂವರನ್ನು ಭಾನುವಾರ ಬೆಳಗ್ಗೆ ೯ ಗಂಟೆಗೆ ದೆಹಲಿ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದರು. ಪಕ್ಷದ ಪರ ವಕೀಲರೊಂದಿಗೆ ತಾವು ಕೂಡ ಪೊಲೀಸ್ ಠಾಣೆಗೆ ತೆರಳುವುದಾಗಿ ಹೇಳಿದ್ದರು.


ತಡೆಗಟ್ಟುವ ಬಂಧನ ಎಂದರೇನು?
ಸಂಭವನೀಯ ಅಪರಾಧವನ್ನು ತಡೆಯಲು ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವ್ಯಕ್ತಿಯನ್ನು ವಶಕ್ಕೆ ಪಡೆಯುವುದನ್ನು ತಡೆಗಟ್ಟುವ ಬಂಧನ ಎಂದು ಕರೆಯಲಾಗುತ್ತದೆ. ಕಾನೂನಿನ ನಿಯಮಗಳು ಮತ್ತು ಅಗತ್ಯ ಸುರಕ್ಷತಾ ಕ್ರಮಗಳ ವ್ಯಾಪ್ತಿಯಲ್ಲಿ ಪೊಲೀಸರು ಇಂತಹ ಕ್ರಮ ಕೈಗೊಳ್ಳಬಹುದು.


ಮೂವರು ಮುಖಂಡರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವುದು ಬಂಧನದ ನಂತರದ ಕಾನೂನು ಪ್ರಕ್ರಿಯೆಯ ಭಾಗವಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ ೧೨೬ರ ಅಡಿಯಲ್ಲಿ ಶಾಂತಿ ಕಾಪಾಡುವ ಬಾಂಡ್ ನೀಡುವಂತೆ ಸೂಚಿಸುವ ಪ್ರಕ್ರಿಯೆಯನ್ನು ಮ್ಯಾಜಿಸ್ಟ್ರೇಟ್ ಪರಿಗಣಿಸಬಹುದಾಗಿದೆ.


ಜಂತರ್ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆಗೆ ಕರೆ
ಇದೇ ವೇಳೆ, ಸಿಜೆಪಿ ಪಕ್ಷವು ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಮತದಾರರ ಪಟ್ಟಿಗಳಲ್ಲಿ ಅಕ್ರಮವಾಗಿ ಬದಲಾವಣೆ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟವನ್ನು ಮುಂದುವರಿಸುವುದಾಗಿ ಪಕ್ಷ ತಿಳಿಸಿದೆ.

ಮುಂಜಾನೆ ಯೂಟ್ಯೂಬರ್ ಧ್ರುವ್ ರಾಠಿ ಬಿಡುಗಡೆ
ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಮುನ್ನಾದಿನದಂದು ಗುರುಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಗುರುಗ್ರಾಮ್ ಪೊಲೀಸರು ಭಾನುವಾರ ಮುಂಜಾನೆ ಬಿಡುಗಡೆ ಮಾಡಿದ್ದಾರೆ.


ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಬೆಳಿಗ್ಗೆ ಸುಮಾರು ೬ ಗಂಟೆಗೆ ಅಪರಾಧ ವಿಭಾಗದ (ಕ್ರೈಂ ಬ್ರಾಂಚ್) ಮೂರು ತಂಡಗಳು ರಾಠಿ ಅವರನ್ನು ವಶಕ್ಕೆ ಪಡೆದಿದ್ದವು. ನಂತರ ಅವರನ್ನು ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಸಲಾಗಿತ್ತು. ವಿಚಾರಣೆಯ ನಂತರ ಅವರನ್ನು ಭಾನುವಾರ ಮುಂಜಾನೆ ಬಿಡುಗಡೆ ಮಾಡಲಾಗಿದೆ.


ಷರತ್ತಿನೊಂದಿಗೆ ಸಿಜೆಪಿ ನಾಯಕರ ಬಿಡುಗಡೆ
ನವದೆಹಲಿ, ಆ.೧೧: ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೂ ಮುನ್ನ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ಬಳಿಕ ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಅಭಿಜಿತ್ ದೀಪೈ, ಆಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ಭಾನುವಾರ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಿಡುಗಡೆ ಮಾಡಿದೆ.


ಮುಂದಿನ ಒಂದು ವರ್ಷ ಶಾಂತಿ ಕಾಪಾಡುವ ಷರತ್ತಿನ ಮೇಲೆ ಮೂವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸಿಜೆಪಿಯ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಸಿಜೆಪಿ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.


ಈ ಕುರಿತು ’ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ದೆಹಲಿ ಪೊಲೀಸರು, ಅಭಿಜಿತ್ ದೀಪೈ, ಆಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ಅಕ್ಟೋಬರ್ ೧೦ರಂದು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿತ್ತು. ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪಾಲಿಸಿ, ಅಕ್ಟೋಬರ್ ೧೧ರಂದು ದೆಹಲಿ ಕ್ಯಾಂಟ್‌ನ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.


ಒಂದು ವರ್ಷದ ಅವಧಿಗೆ ಶಾಂತಿ ಮತ್ತು ಉತ್ತಮ ನಡವಳಿಕೆಯನ್ನು ಕಾಪಾಡುವಂತೆ ೫೦ ಸಾವಿರ ರೂ. ಮೊತ್ತದ ಜಾಮೀನು ಬಾಂಡ್ ಮತ್ತು ಭದ್ರತಾ ಬಾಂಡ್ ಸಲ್ಲಿಸಿದ ಬಳಿಕ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂವರು ನಾಯಕರ ಬಿಡುಗಡೆ ಕುರಿತು ರತ್ನಾ ಸಿಂಗ್ ಕೂಡ ’ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.