ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರಕುಮಾರ ಅವರನ್ನು ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಇಂದು ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಸಂಚಾಲಕ ಡಾ. ಡಿ.ಜಿ ಸಾಗರ,ಜಿಲ್ಲಾ ಮುಖಂಡ ಸುರೇಶ ಹಾದಿಮನಿ ಸೇರಿದಂತೆ ಸಮಿತಿಯ ಮುಖಂಡರು ಪಾಲ್ಗೊಂಡರು.