
ಗದಗ,ಅ.೧೮: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಅಕ್ಟೋಬರ್ ೨೩ ರಂದು ಮತದಾನವು ಜರುಗಲಿದ್ದು, ವ್ಯವಸ್ಥಿತ, ಸುಗಮ ಹಾಗೂ ಶಾಂತಿಯುತ ಮತದಾನ ನಡೆಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ನೋಡಲ್ ಅಧಿಕಾರಿಗಳು ಹಾಗೂ ತಾಲೂಕಾ ತಹಶೀಲ್ದಾರರುಗಳೊಂದಿಗೆ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ೨೭ ಮತಗಟ್ಟೆಗಳಿದ್ದು ಅಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದAತೆ ಕ್ರಮ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಮತದಾನ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದAತೆ ಮುನ್ನೆಚ್ಚರಿಕೆ ವಹಿಸಬೇಕು. ಮತದಾನ ಕೇಂದ್ರದ ಒಳಗಡೆ ಆಗಮಿಸುವ ಹಾಗೂ ಕೇಂದ್ರದಿAದ ನಿರ್ಗಮಿಸುವ ಕುರಿತು ಮಾತ್ರ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾನ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗ್ ಮತ್ತು ವಿಡಿಯೋ ಕಣ್ಗಾವಲು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಚುನಾವಣಾ ತಹಶೀಲ್ದಾರ ಸಂತೋಷ ಹಿರೇಮಠ ಅವರು ಮಾತನಾಡಿ ಚುನಾವಣಾ ನಿಯಮಗಳು, ಮತಗಟ್ಟೆಗಳ ನಿರ್ವಹಣೆ ಹಾಗೂ ಸಿಬ್ಬಂದಿಗಳ ಜವಾಬ್ದಾರಿಗಳ ಕುರಿತು ವಿಸ್ತöÈತವಾಗಿ ವಿವರಿಸಿದರು. ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಮಿಥುನ್ ಎಚ್.ಎನ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಡಿಎಲ್ಆರ್ ರುದ್ರನಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.























