
ಕಲಬುರಗಿ,ಅ.20: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬ್ರಹ್ಮಪುರ ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಮಮ್ತಾಜ್-ಉಲ್-ಮಲಿಕ್ ಎಂಬಾತನನ್ನು ಕೇಂದ್ರ ಗುಪ್ತಚರ ಸಂಸ್ಥೆಯ ಸುಳಿವಿನ ಮೇರೆಗೆ ಪೆÇಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಸರಾಫ್ ಬಜಾರ್ನಲ್ಲಿ ಕೆಲಸ:
ಮಮ್ತಾಜ್-ಉಲ್-ಮಲಿಕ್ ಕಲಬುರಗಿ ನಗರದ ಸರಾಫ್ ಬಜಾರ್ನಲ್ಲಿ ಆಭರಣ ತಯಾರಿಕೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣದ ಖಾತೆಗಳೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ಸಂದೇಶಗಳ ಮೂಲಕ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದಕ್ಕೂ ಮುನ್ನ ಆಗಸ್ಟ್ ತಿಂಗಳÀಲ್ಲಿ ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಮತ್ತು ಸಲ್ಮಾನ್ ಎಂಬುವವರನ್ನು ಕೂಡ ಕಲಬುರಗಿಯಲ್ಲಿ ಶಂಕಿತ ಉಗ್ರ ನಂಟಿನ ಹಿನ್ನೆಲೆಯಲ್ಲಿ ಪೆÇಲೀಸರು ವಶಕ್ಕೆ ಪಡೆದಿದ್ದರು.























