Home ಮುಖಪುಟ ಸುದ್ದಿ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನ

ನಗೋಯಾ.ಅ.೧೯ – ೨೦೨೬ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಮೋನಾ ಅಗರ್ವಾಲ್ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದು, ಈ ಮೂಲಕ ಭಾರತ ತನ್ನ ಖಾತೆಯನ್ನು ತೆರೆದಿದೆ.

ಐಚಿ-ನಗೋಯಾದಲ್ಲಿ ನಡೆಯುತ್ತಿದ್ದ ೫ನೇ ಏಷ್ಯನ್ ಪ್ಯಾರಾ ಗೇಮ್ಸ್‌ನ ೧೦ ಮೀಟರ್ ಏರ್ ರೈಫಲ್ ವಿಭಾಗದ ಅರ್ಹತಾ ಸುತ್ತಿನಲ್ಲಿ ಭಾರತದ ಮೋನಾ ಅಗರ್ವಾಲ್ ಮತ್ತು ಅವನಿ ಲೇಖರಾ ಅತ್ಯುತ್ತಮ ಪ್ರದರ್ಶನ ನೀಡಿ, ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರೂ ಶೂಟರ್‌ಗಳು ಭಾರತಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನು ತಂದುಕೊಟ್ಟಿದ್ದಾರೆ.

ಅಂತಿಮ ಹಂತದಲ್ಲಿ ಮೋನಾ ಅವರು ಅಂಕಟ್ಟಿಯಲ್ಲಿ ೬೨೯.೧ ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡರು. ಈ ಮೂಲಕ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚೀನಾದ ಜಾಂಗ್ ಕ್ಯೂಪಿಂಗ್ ಅವರ ಹೆಸರಲ್ಲಿದ್ದ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದ್ದಾರೆ. ಅವನಿ ಲೇಖರಾ ಅವರು ೬೨೯.೪ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿ ತಮ್ಮದಾಗಿಸಿಕೊಂಡರು.