
ಕಲಬುರಗಿ: ಕಲಬುರಗಿ ನಗರ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿಎಆರ್ ಮೈದಾನದ ಪೊಲೀಸ್ ಹುತಾತ್ಮರ ಸ್ಮಾರಕದಲ್ಲಿ ಇಂದು ಕರ್ತವ್ಯ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಇಕ್ರಂ ಶರೀಫ್, ಈಶಾನ್ಯ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಎಸ್.ಪಿ.ಅಡ್ಡೂರು ಶ್ರೀನಿವಾಸಲು ಇದ್ದರು.























