
ಯಾದಗಿರಿ: ಮೈಸೂರಿನ ವಿಶ್ವವಿಖ್ಯಾತ ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯ ಸಂದರ್ಭದಲ್ಲಿ ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪೆÇಲೀಸ್ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾಡಳಿತ ಅಧಿಕೃತವಾಗಿ ಮೀಡಿಯಾ ಪಾಸ್ ನೀಡಿದ್ದರೂ, ವಿಜಯದಶಮಿ ದಿನದಂದು ಜಂಬೂ ಸವಾರಿ ಮೆರವಣಿಗೆಯನ್ನು ವರದಿ ಮಾಡಲು ಅರಮನೆ ಆವರಣದೊಳಗೆ ಪ್ರವೇಶಿಸಲು ಪೆÇಲೀಸ್ ಅಧಿಕಾರಿಗಳು ನಿರಾಕರಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವ, ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯ ದೃಶ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದರು. ಆದರೆ, ಈ ಸಂದರ್ಭದಲ್ಲಿ ಪೆÇಲೀಸರು ವಿನಾಕಾರಣ ಅಡ್ಡಿಪಡಿಸಿರುವುದು ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಬೆಳವಣಿಗೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರೊಂದಿಗೆ ಪೆÇಲೀಸ್ ಅಧಿಕಾರಿಗಳು ಅನುಚಿತವಾಗಿ ವರ್ತಿಸಿರುವುದು ಆಘಾತಕಾರಿ ಸಂಗತಿಯಾಗಿದೆ. ಹಿರಿಯ ಪೆÇಲೀಸ್ ಅಧಿಕಾರಿಗಳೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ರೀತಿಯಾಗಿ ನಡೆದುಕೊಂಡರೆ, ಸಾಮಾನ್ಯ ಜನರೊಂದಿಗೆ ಅವರ ವರ್ತನೆ ಹೇಗಿರಬಹುದು ಎಂಬ ಪ್ರಶ್ನೆ ಮೂಡುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತವೇ ಅಧಿಕೃತವಾಗಿ ನೀಡಿದ ಮೀಡಿಯಾ ಪಾಸ್ಗಳಿಗೆ ಸೂಕ್ತ ಗೌರವ ನೀಡದೆ, ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಗಂಭೀರ ವಿಚಾರವಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಹೇಳುವುದಷ್ಟೇ ಸಾಲದು; ಪತ್ರಕರ್ತರು ಯಾವುದೇ ಭಯ, ಒತ್ತಡ ಅಥವಾ ಅಡ್ಡಿಯಿಲ್ಲದೆ ಕಾರ್ಯನಿರ್ವಹಿಸಲು ಅಗತ್ಯವಾದ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಗಂಭೀರವಾಗಿ ಪರಿಗಣಿಸಿ, ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರೆಂದು ಕಂಡುಬರುವ ಪೆÇಲೀಸ್ ಅಧಿಕಾರಿಗಳ ವಿರುದ್ಧ ಕಾನೂನುಬದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಲ್ಲಪ್ಪ ಸಂಕೀನ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಪತ್ರಕರ್ತರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪತ್ರಕರ್ತರ ಹಕ್ಕುಗಳು ಹಾಗೂ ಮಾಧ್ಯಮ ಸ್ವಾತಂತ್ರ್ಯವನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.






















