
ಬಾದಾಮಿ,ಅ.೨೬: ಶ್ರೀ ಮದ್ವೀರಶೈವ ಶಿವಯೋಗಮಂದಿರ ಸಂಸ್ಥೆಯ ಶಾಖಾಮಠ ಸೇವಾ ಬಳಗದ ವತಿಯಿಂದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಇವರ ಏಕತಾರಿ ಕಥಾ ಸಂಕಲನ ಅವಲೋಕನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಶಿವಯೋಗಮಂದಿರ ಸಂಸ್ಥೆಯ ಉಪಾಧ್ಯಕ್ಷ ಡಾ.ಸದಾಶಿವ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಹಂಪಿ ಕನ್ನಡ ವಿವಿ ವಿಮರ್ಶಕ ಡಾ.ವೆಂಕಟಗಿರಿ ದಳವಾಯಿ ವಿಮರ್ಶೆ ಮಾಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಚನ್ನಪ್ಪ ಕಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉಜ್ವಲ ಬಸರಿ ಸ್ವಾಗತಿಸಿ, ನಿರೂಪಿಸಿದರು. ಇಷ್ಟಲಿಂಗ ಶಿರಶಿ ವಂದಿಸಿದರು.





















