
ಕಲಬುರಗಿ,ಅ.26-ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ವಿದ್ಯಾನಗರದಲ್ಲಿರುವ ಶಿವಪ್ರಸಾದ ಸಜ್ಜನ್ ಅವರ ಜ್ಯೋತಿ ಆಯಿಲ್ ಮಿಲ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ತಗುಲಿ ಸುಮಾರು 1.50 ರಿಂದ 2 ಲಕ್ಷ ರೂಪಾಯಿ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಂಗಡಿಯಲ್ಲಿದ್ದ 250 ಲೀಟರ್ ಕುಸುಬೆ ಎಣ್ಣೆ, ಫರ್ನಿಚರ್ ಮತ್ತು ಮತ್ತಿತರರ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಅಂಗಡಿಗೆ ಬೆಂಕಿ ತಗುಲಿದ್ದು, ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.






















