
ಜೇವರ್ಗಿ: ಪಟ್ಟಣದ ಹೊರವಲಯದ ಚೆನ್ನೈ-ಸೂರತ್ ಆರು ಪಥದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಯುವಕ ಮಲ್ಲು ಮೃತಪಟ್ಟಿದ್ದು, ಮತ
ಮತ್ತೊಬ್ಬ ಯುವಕ ವಿನೋದ್ ತಾಳಿಕೋಟೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಮಲ್ಲು ಹಾಗೂ ಗಾಯಗೊಂಡ ವಿನೋದ್ ಇಬ್ಬರೂ ಜೇವರ್ಗಿಯಲ್ಲಿರುವ ತಮ್ಮ ಚಿಕ್ಕಪ್ಪನ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಮಲ್ಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬೈಕ್ನ ಹಿಂಬದಿ ಸವಾರ ವಿನೋದ್ ತಾಳಿಕೋಟೆ ಅವರಿಗೂ ತೀವ್ರ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಜೇವರ್ಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























