Home ಜಿಲ್ಲೆ ಬೆಂಗಳೂರು ವಾಲ್ಮೀಕಿ, ಅಂಬೇಡ್ಕರ್ ದೇಶದ ಮಾರ್ಗದರ್ಶಕ ಶಕ್ತಿ

ವಾಲ್ಮೀಕಿ, ಅಂಬೇಡ್ಕರ್ ದೇಶದ ಮಾರ್ಗದರ್ಶಕ ಶಕ್ತಿ

filter: 0; fileterIntensity: 0.0; filterMask: 0; captureOrientation: 0; runfunc: 0; algolist: 0; multi-frame: 1; brp_mask:8; brp_del_th:0.0005,0.0000; brp_del_sen:0.1300,0.0000; motionR: null; delta:1; bokeh:1; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 243.0;aec_lux_index: 0;albedo: ;confidence: ;motionLevel: 0;weatherinfo: null;temperature: 38;zeissColor: bright;

ಕೋಲಾರ,ಅ.೨೭-ಕೋಲಾರದ ಹೊರವಲಯದಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜದ ಸಂಘಟನೆಗಳ ಸಹಯೋಗದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ ಸಂವಿಧಾನ ದೇಶದ ಮಾರ್ಗದರ್ಶಕ ಶಕ್ತಿಗಳಾಗಿದ್ದು, ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ ಇಂಥ ಮಹನೀಯರೇ ನಮ್ಮ ನಿಜವಾದ ಹೀರೋಗಳಾಗಬೇಕು ಎಂದು ತಿಳಿಸಿದರು. ಪ್ರತಿಯೊಬ್ಬರ ಜೀವನದ ಮೊದಲ ಹೀರೋಗಳು ತಂದೆ-ತಾಯಿಯಾದರೂ, ದೇಶ ಹಾಗೂ ಸಮಾಜಕ್ಕಾಗಿ ಸಾಧನೆ ಮಾಡಿದ ಮಹನೀಯರನ್ನು ಸ್ಮರಿಸಿ ಗೌರವಿಸಬೇಕು ಎಂದ ಅವರು, ಅವರ ವಿಚಾರಗಳು ಮತ್ತು ಆದರ್ಶಗಳ ಆಧಾರದಲ್ಲೇ ದೇಶ ಮುನ್ನಡೆಯುತ್ತಿದೆ ಎಂದು ಹೇಳಿದರು. ಸಮಾಜದಲ್ಲಿ ಪ್ರತಿಯೊಬ್ಬರೂ ಒಳ್ಳೆಯ ಕೆಲಸಗಳನ್ನು ಮಾಡಿ, ಇತರರಿಗೆ ಒಳ್ಳೆಯದನ್ನು ಹೇಳುವುದರ ಜೊತೆಗೆ ನಮ್ಮಿಂದ ಸಮಾಜಕ್ಕೆ ಕೊಡುಗೆ ದೊರೆಯುವಂತೆ ಬದುಕಬೇಕು ಮತ್ತು ನಾವು ಇಲ್ಲದ ಕಾಲದಲ್ಲೂ ಸಮಾಜ ನಮ್ಮನ್ನು ಒಳ್ಳೆಯ ಕಾರ್ಯಗಳಿಗಾಗಿ ನೆನಪಿಸಿಕೊಳ್ಳುವಂತಿರಬೇಕು ಎಂದು ಅಭಿಪ್ರಾಯಪಟ್ಟರು. ವಕ್ಕಲೇರಿಯಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸುವ ಬೇಡಿಕೆಗೆ ಸ್ಪಂದಿಸಿದ ಅವರು, ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯದ ಹಾದಿ ತೋರಿದ ದೇವರಾಜ ಅರಸು, ಹಾವನೂರು ಸೇರಿದಂತೆ ಅನೇಕ ಮಹನೀಯರ ಕೊಡುಗೆಯನ್ನು ಸ್ಮರಿಸಬೇಕು ಎಂದರು. ಡಾ. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ ಹಾಗೂ ಬಾಬು ಜಗಜೀವನ್ ರಾಮ್ ರಂತಹ ನಾಯಕರು ಶೋಷಿತ ಹಾಗೂ ಅವಕಾಶವಂಚಿತ ಸಮುದಾಯಗಳಿಗೆ ಧ್ವನಿಯಾಗಿದ್ದಾರೆ ಎಂದು ತಿಳಿಸಿದ ಅವರು, ಚುನಾವಣೆಗಳು ಬಂದಾಗ ಮಾತ್ರ ಮಹನೀಯರ ಬಗ್ಗೆ ಪ್ರೀತಿ ತೋರಿಸುವುದು ಸಾಮಾನ್ಯವಾಗಿದ್ದು, ಸಮುದಾಯದ ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುವವರನ್ನು ಗುರುತಿಸಬೇಕು ಮತ್ತು ಒಗ್ಗಟ್ಟನ್ನು ಒಡೆಯಲು ಯತ್ನಿಸುವವರ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದರು. ಶಿಕ್ಷಣವೇ ಸಾಮಾಜಿಕ ಬದಲಾವಣೆಯ ಪ್ರಮುಖ ಸಾಧನವಾಗಿದ್ದು, ಅಂಬೇಡ್ಕರ್ ಅವರು ಪಟ್ಟ ಕಷ್ಟಗಳನ್ನು ಸ್ಮರಿಸಿ ಇಂದಿನ ಯುವಜನತೆ ಲಭ್ಯವಿರುವ ಅವಕಾಶಗಳು ಹಾಗೂ ಮೀಸಲಾತಿಯನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಮತ್ತು ಶಿಕ್ಷಣದ ಮೂಲಕ ಸಂಘಟಿತರಾಗಿ ಸಮುದಾಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.


ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷ ಎನ್. ಅಂಬರೀಷ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾಲ್ಮೀಕಿ ಸಮುದಾಯವು ಧೈರ್ಯ, ಭಕ್ತಿ ಹಾಗೂ ಹೋರಾಟದ ಪರಂಪರೆಗೆ ಹೆಸರುವಾಸಿಯಾಗಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ರಾಮಾಯಣದ ಮೌಲ್ಯಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು. ಸಮುದಾಯದ ಬಗ್ಗೆ ಅಪಪ್ರಚಾರ ಮಾಡುವವರಿಗೆ ತಕ್ಕ ಉತ್ತರ ನೀಡಲು ಜನರು ಜಾಗೃತರಾಗಬೇಕು ಎಂದು ತಿಳಿಸಿದ ಅವರು, ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಹಾಗೂ ವಕ್ಕಲೇರಿಯಲ್ಲಿ ಲಭ್ಯವಿರುವ ಒಂದು ಎಕರೆ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು.


ಕಾರ್ಯಕ್ರಮಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿ, ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ವಿವಿಧ ಇಲಾಖೆಗಳು ಹಾಗೂ ಸಂಘಟನೆಗಳ ವತಿಯಿಂದ ಆಗಮಿಸಿದ್ದ ೫೦ಕ್ಕೂ ಹೆಚ್ಚು ಪಲ್ಲಕ್ಕಿಗಳು, ಜಾನಪದ ಕಲಾತಂಡಗಳು ಮತ್ತು ಕೃತಕ ಆನೆ ಮೆರವಣಿಗೆಯು ಪ್ರಮುಖ ಆಕರ್ಷಣೆಯಾಗಿದ್ದವು. ಮೆರವಣಿಗೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಗಳನ್ನು ಹೊತ್ತು ಸಾಗಲಾಯಿತು ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ. ಶಿವಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಪ್ಸರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮೈಲಾರಪ್ಪ ಸೇರಿದಂತೆ ಹಲವು ಮುಖಂಡರು ಹಾಗೂ ವಾಲ್ಮೀಕಿ ಸಮಾಜದ ಗಣ್ಯರು ಉಪಸ್ಥಿತರಿದ್ದರು.