
ಕೋಟ- ಕೋಟ ಜಂಕ್ಷನ್ ಬಳಿ ಅಕ್ಟೋಬರ್ ೨೬ರಂದು ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (೨೭) ಮೃತಪಟ್ಟವರು.
ಅಕ್ಟೋಬರ್ ೨೬ರಂದು ಮುಂಜಾನೆ ಕೋಟ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ಗುರುದಾಸ್ ಶೆಣೈ ಅವರಿಗೆ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಸೈಕಲ್ ಸವಾರ ಗುರುದಾಸ್ ಶೆಣೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಅಪಘಾತದಲ್ಲಿ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು.
ಕೋಟ ಜಂಕ್ಷನ್ನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಸೈಕಲ್ ಸವಾರ ಹಾಗೂ ಕಾರು ಚಾಲಕ ಇಬ್ಬರೂ ಮೃತಪಟ್ಟು ಸಾವಿನ ಸಂಖ್ಯೆ ಎರಡಾಗಿದೆ.

























