Home ಜಿಲ್ಲೆ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಡಾ. ಸಲೀಂ ಎಂ. ದೇಸಾಯಿ ಆಯ್ಕೆ

ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಡಾ. ಸಲೀಂ ಎಂ. ದೇಸಾಯಿ ಆಯ್ಕೆ

ಸಂಜೆವಾಣಿ ವಾರ್ತೆ,
ವಿಜಯಪುರ, ಅ. ೨೮: ವಿಜಯಪುರದ ಅಂಜುಮನ್-ಎ-ಇಸ್ಲಾA ಸಂಸ್ಥೆಯ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ-೨ರ ಕಾರ್ಯಕ್ರಮಾಧಿಕಾರಿ ಡಾ. ಸಲೀಂ ಎಂ. ದೇಸಾಯಿ ಅವರು ೨೦೨೪-೨೫ನೇ ಶೈಕ್ಷಣಿಕ ಸಾಲಿನ ‘ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಸಮಾಜಮುಖಿ ಸೇವೆ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಡಾ. ಸಲೀಂ ಎಂ. ದೇಸಾಯಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಎನ್‌ಎಸ್‌ಎಸ್‌ನ ‘ನಾನಲ್ಲ, ನೀನು’ (ಓoಣ ಒe, ಃuಣ ಙou) ಎಂಬ ಧ್ಯೇಯವಾಕ್ಯಕ್ಕೆ ಅನುಗುಣವಾಗಿ ಡಾ. ಸಲೀಂ ಎಂ. ದೇಸಾಯಿ ಅವರು ವಿದ್ಯಾರ್ಥಿ ಸ್ವಯಂಸೇವಕರಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳನ್ನು ಸಮುದಾಯದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತಿರುವ ಅವರ ಸೇವೆ ಪ್ರಶಂಸನೀಯವಾಗಿದೆ.
ಈ ಸಾಧನೆಗೆ ಅಂಜುಮನ್-ಎ-ಇಸ್ಲಾA ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಜೆ. ಜಹಾಗೀರದಾರ್, ಎನ್‌ಎಸ್‌ಎಸ್ ಘಟಕ-೧ರ ಕಾರ್ಯಕ್ರಮಾಧಿಕಾರಿ ಡಾ. ಸದ್ದಾಂಹುಸೇನ್ ಮುಜಾವರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್‌ಎಸ್‌ಎಸ್ ಘಟಕ-೧ ಹಾಗೂ ಘಟಕ-೨ರ ಸ್ವಯಂಸೇವಕರು ಡಾ. ಸಲೀಂ ಎಂ. ದೇಸಾಯಿ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ಡಾ. ಸಲೀಂ ಎಂ. ದೇಸಾಯಿ ಅವರ ಈ ಸಾಧನೆಯು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದು, ಇತರ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿದಾಯಕವಾಗಿದೆ. ಮುಂದಿನ ದಿನಗಳಲ್ಲಿಯೂ ಅವರು ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಸಾಧನೆ ಮಾಡಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ಶುಭ ಹಾರೈಸಿದ್ದಾರೆ.