Home ಮುಖಪುಟ ಸುದ್ದಿ ದೇಶದಾದ್ಯಂತ ಬ್ಲಾಕ್ ಮಟ್ಟದಲ್ಲಿ ಕೈ ಪ್ರತಿಭಟನೆ

ದೇಶದಾದ್ಯಂತ ಬ್ಲಾಕ್ ಮಟ್ಟದಲ್ಲಿ ಕೈ ಪ್ರತಿಭಟನೆ

ಬೆಂಗಳೂರು, ನ. ೩- ನ.೫ರಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಎಸ್‌ಐಆರ್ ಪ್ರಕ್ರಿಯೆ ಹಾಗೂ ಮುಖ್ಯಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಬೃಹತ್ ಸಭೆ ಏರ್ಪಡಿಸಿದ್ದೇವೆ. ಎಸ್‌ಐಆರ್ ಹಾಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನ.೧ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ವತಿಯಿಂದ ನಡೆದ ಪ್ರತಿಭಟನೆಯ ಪ್ರತಿರೋಧದ ಮುಂದುವರಿದ ಭಾಗವಾಗಿ ಈ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿದರು.


ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಾದ್ಯಂತ ತಾಲ್ಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಬೇಕು ಎಂದು ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ತೀರ್ಮಾನಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಮೈತ್ರಿಕೂಟದ ನಾಯಕರು ತೀರ್ಮಾನಿಸಿದ್ದೇವೆ.ಎಂದರು

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಹಾಗೂ ಆರ್ ಎಸ್‌ಎಸ್ ಪ್ರಯತ್ನ ವಿರುದ್ಧ ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯಮಟ್ಟದಲ್ಲಿ ಹೋರಾಟ ಮಾಡಿದ ಬಳಿಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು. ಎಂದು ಹೇಳಿದರು


ಇದೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ಕಾರ್ಯದರ್ಶಿ ಕೆ. ಪ್ರಕಾಶ್ ಎಸ್‌ಐಆರ್ ರದ್ದಾಗಬೇಕು, ಜ್ಞಆನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಮುಖ್ಯ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆ ಪ್ರಜಾಸತಾತ್ಮಕ ಗೊಳಿಸಬೇಕು. ಸುಪ್ರೀಂಕೋರ್ಟ್ ಸೂಚನೆ ಅನುಸಾರ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಮುಖ್ಯ ಚುನಾವಣಾ ಆಯುಕ್ತರಿಗೆ ಶಾಶ್ವತ ವಿನಾಯಿತಿ ನೀಡಿರುವ ಕಾಯ್ದೆ ಹಿಂಪಡೆಯಬೇಕು ಎಂಬುದು ನಮ್ಮ ಪ್ರಮುಖವಾದ ವಿಚಾರ. ಈ ಬೇಡಿಕೆಗಳನ್ನು ಆಗ್ರಹಿಸಿ ನ.೫ರಂದು ಹೋರಾಟ ಮಾಡುತ್ತಿದ್ದೇವೆ.


ನಂತರದ ದಿನಗಳಲ್ಲಿ ರಾಜ್ಯದಲ್ಲಿ ಈ ಹೋರಾಟವನ್ನು ವಿಕೇಂದ್ರಿಕರಣಗೊಳಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದ್ದು, ಇಂಡಿಯಾ ಒಕ್ಕೂಟ ಇದನ್ನು ವಿಸ್ತಾರವಾಗಿ ತೆಗೆದುಕೊಂಡು ಹೋಗಲು ತೀರ್ಮಾನಕ್ಕೆ ಬಂದಿದ್ದೇವೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಪಕ್ಷಗಳು ಭಾಗವಹಿಸಲಿವೆ.ಎಂದರು

ಭಾರತವನ್ನು ಸರ್ವಾಧಿಕಾರಿ ನೆಲೆಗಟ್ಟಿಗೆ ಪರಿವರ್ತಿಸುವ ಹಾಗೂ ಕೋಮುವಾದಿ ಹಿಂದುತ್ವ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿ ಪ್ರಯತ್ನಕ್ಕೆ ಈ ದೇಶದಲ್ಲಿ ಅವಕಾಶವಿಲ್ಲ ಎಂಬ ಸಂದೇಶ ನೀಡಲು ನಾವು ಮುಂದಾಗಿದ್ದೇವೆ. ಎಂದರು

ಮಾಧ್ಯಮಗೋಷ್ಠಿಯಲ್ಲಿ ಸಿಪಿಎಂ ಪಕ್ಷದ ಸಾಥಿ ಸುಂದರೇಶ್, ಮಹಾಂತೇಶ್ ಫಾರ್ವರ್ಡ್ ಬ್ಲಾಕ್ ನ ಶಿವಶಂಕರ್, ಅಲಿ, ಸಿಪಿಐಎಂಎಲ್ ಪಕ್ಷದ ಕ್ಲಿಫ್ಟನ್ ಡಿ ರೊಜಾರಿಯೋ, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗ ಅಧ್ಯಕ್ಷರಾದ ರಮೇಶ್ ಬಾಬು ಅವರು ಉಪಸ್ಥಿತರಿದ್ದರು.