Home ಸುದ್ದಿ ರಾಷ್ಟ್ರೀಯ ನಟ ತುಷಾರ್ ಕಪೂರ್‍ಗೆ 5 ಕೋಟಿ ರೂ. ಸುಲಿಗೆ ಬೆದರಿಕೆ

ನಟ ತುಷಾರ್ ಕಪೂರ್‍ಗೆ 5 ಕೋಟಿ ರೂ. ಸುಲಿಗೆ ಬೆದರಿಕೆ

ಮುಂಬೈ, ನ.3-ಬಾಲಿವುಡ್ ನಟ ತುಷಾರ್ ಕಪೂರ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ 5 ಕೋಟಿ ರೂಪಾಯಿ ಸುಲಿಗೆ ಬೆದರಿಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ತಾನು ಬಿಷ್ಣೋಯ್ ಗ್ಯಾಂಗ್‍ನ ಸದಸ್ಯ ಹ್ಯಾರಿ ಬಾಕ್ಸರ್ ಎಂದು ಪರಿಚಯಿಸಿಕೊಂಡು ನಟನ ಬಳಿ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಘಟನೆ ಬಾಲಿವುಡ್ ಚಿತ್ರರಂಗವನ್ನು ಬೆಚ್ಚಿಬೀಳಿಸಿದೆ.


ಬೆದರಿಕೆ ಕರೆ ಬಂದ ತಕ್ಷಣ ತುಷಾರ್ ಕಪೂರ್ ಮುಂಬೈ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೆÇಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ
ಇತ್ತೀಚೆಗಷ್ಟೇ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡು ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ಗೆ ಸಂಬಂಧಿಸಿದ ವ್ಯಕ್ತಿಗಳು ಹೊತ್ತುಕೊಂಡಿದ್ದರು


ತುಷಾರ್ ಕಪೂರ್ ಅವರಿಗೂ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸುಲಿಗೆ ಬೆದರಿಕೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಸಲ್ಮಾನ್ ಖಾನ್, ರಣವೀರ್ ಸಿಂಗ್, ರೋಹಿತ್ ಶೆಟ್ಟಿ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳಿಗೂ ಈ ಹಿಂದೆ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆಗಳು ಬಂದಿದ್ದವು.