
ಕಲಬುರಗಿ,ನ.3-ಬೆಂಗಳೂರು ಮೂಲದ ಪ್ರತಿಷ್ಠಿತ “ಕುಂಭಮೇಳ ಸಾಂಸ್ಕøತಿಕ ಆಕೆಡಮಿ” ವತಿಯಿಂದ ಪ್ರತಿ ವರ್ಷ ಕೊಡುವ ರಾಜ್ಯಮಟ್ಟದ “ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ”ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಆಯ್ಕೆಯಾಗಿದ್ದಾರೆ.
ನ.23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಡಿಗೇರ ಅವರ ಎರಡು ದಶಕಗಳ ಕನ್ನಡದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡಮಿಯ ಶೇಖರ ತೆಗ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರ್ಷ: ಯುವ ಸಾಹಿತಿ ಸುರೇಶ್ ಬಡಿಗೇರವರಿಗೆ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದಕ್ಕೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೆರಿ ನಾಲ್ಕುಚಕ್ರ ಚಾರಿಟೆಬಲ್ ಟ್ರಸ್ಟ್ ಮುಖ್ಯಸ್ಥೆ ಮಾಲಾ ಕಣ್ಣಿ ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.























