Home ಜಿಲ್ಲೆ ಕಲಬುರಗಿ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ,ನ.3-ನೇಣು ಹಾಕಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ.
ರಾಘವ ಜಗದೇವಪ್ಪ ಬಿರಾದಾರ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ಸೆಮ್‍ನಲ್ಲಿ ಓದುತ್ತಿದ್ದ ರಾಘವ ಯಾವುದೋ ವಿಷಯಕ್ಕೆ ಮನಸ್ಸಿಗೆ ನೋವು ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ದಸರಾ ಹಬ್ಬಕ್ಕೆ ಕಲಬುರಗಿಗೆ ಆಗಮಿಸಿದ ಮಗಳನ್ನು ಮರಳಿ ಬೆಂಗಳೂರಿಗೆ ಕಳುಹಿಸಲು ರಾಘವ ಅವರ ತಂದೆ-ತಾಯಿ ಸೋಮವಾರ ರಾತ್ರಿ 8.30ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಹೋಗಿದ್ದರು. ಅವರು ಮರಳಿ ಮನೆಗೆ ಬರುವುದರೊಳಗೆ ರಾಘವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.