Home ಜಿಲ್ಲೆ ಕಲಬುರಗಿ ಕನ್ನಡ ಭಾಷೆ,ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕು: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ

ಕನ್ನಡ ಭಾಷೆ,ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕು: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ,ನ.4: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ), ಕಲಬುರಗಿ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ‘ಕರ್ನಾಟಕ ಏಕೀಕರಣ: ನಡೆದು ಬಂದ ದಾರಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಮಾತನಾಡಿ, ಕರ್ನಾಟಕ ಏಕೀಕರಣದ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ ನಾಡಿನ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯಪೂರ್ವದಲ್ಲಿ ಕನ್ನಡ ಮಾತನಾಡುವ ಜನರು ಮೈಸೂರು ಸಂಸ್ಥಾನ ಹಾಗೂ ಮುಂಬೈ, ಮದ್ರಾಸ್ ಮತ್ತು ಹೈದರಾಬಾದ್ ಪ್ರಾಂತ್ಯಗಳ ಆಡಳಿತದಡಿ ವಿಭಜನೆಗೊಂಡಿದ್ದರು. ಅನೇಕ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ನಿರಂತರ ಹೋರಾಟದ ಫಲವಾಗಿ ಭಾಷಾವಾರು ರಾಜ್ಯಗಳ ಪುನರ್‍ರಚನೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿತು. ರಾಜ್ಯಗಳ ಪುನರ್‍ರಚನಾ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಫಜಲ್ ಅಲಿ ಅವರ ವರದಿಯ ಆಧಾರದ ಮೇಲೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಭಾಷಾವಾರು ಆಧಾರದಲ್ಲಿ ಪುನರ್‍ರಚನೆಗೊಂಡವು ಎಂದು ಸ್ಮರಿಸಿದರು.
ಭಾರತದ ಸಾಂಸ್ಕೃತಿಕ ಏಕತೆಯೇ ದೇಶದ ಬಹುದೊಡ್ಡ ಶಕ್ತಿಯಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಎಲ್ಲ ರಾಜ್ಯಗಳು ಸಮಗ್ರವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ನಿಜವಾದ ಪ್ರಗತಿ ಸಾಧ್ಯ. ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜ್ಞಾನ ಸಂಪಾದಿಸಲು ಅನುಕೂಲವಾಗುತ್ತದೆ. ಅನೇಕ ವಿದೇಶಿ ರಾಷ್ಟ್ರಗಳು ತಮ್ಮ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡುತ್ತಿರುವುದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.
ಕರ್ನಾಟಕ ಏಕೀಕರಣ: ನಡೆದು ಬಂದ ದಾರಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಮುಖ್ಯಸ್ಥ ಪೆÇ್ರ. ವೆಂಕಟರಾವ್ ಎಂ. ಪಲಾಟೆ ಅವರು, ಕರ್ನಾಟಕದ ಇತಿಹಾಸವೆಂದರೆ ಏಕೀಕರಣ, ಹೋರಾಟ ಮತ್ತು ನಿರಂತರ ಪರಿಶ್ರಮದ ಇತಿಹಾಸವಾಗಿದೆ. ಅನೇಕ ಹೋರಾಟಗಾರರು, ಸಂಘಟನೆಗಳು, ಕನ್ನಡದ ಕಟ್ಟಾಳುಗಳು, ಸಾಹಿತಿಗಳು, ಬರಹಗಾರರು ಹಾಗೂ ರಾಜಕೀಯ ನಾಯಕರು ನಡೆಸಿದ ನಿರಂತರ ಹೋರಾಟ, ತ್ಯಾಗ ಮತ್ತು ಪರಿಶ್ರಮದಿಂದ ಕರ್ನಾಟಕ ಏಕೀಕರಣ ಸಾಧ್ಯವಾಯಿತು ಎಂದು ಹೇಳಿದರು.
ಭಾರತದ ಸ್ವಾತಂತ್ರ್ಯ ಹೋರಾಟದ ಜೊತೆಯಲ್ಲಿಯೇ ಕರ್ನಾಟಕ ಏಕೀಕರಣ ಚಳವಳಿಯೂ ವಿವಿಧ ಹಂತಗಳಲ್ಲಿ ನಡೆದಿದ್ದು, ಐತಿಹಾಸಿಕ ಮಹತ್ವ ಹೊಂದಿದೆ. ಅಂದು ಕನ್ನಡ ಭಾಷಿಕ ಪ್ರದೇಶಗಳು ಮುಂಬೈ, ಮದ್ರಾಸ್, ಹೈದರಾಬಾದ್ ಮತ್ತು ಮೈಸೂರು ಪ್ರಾಂತ್ಯಗಳ ಆಡಳಿತಕ್ಕೆ ಒಳಪಟ್ಟಿದ್ದವು. ಈ ಪ್ರದೇಶಗಳಲ್ಲಿ ಆಡಳಿತ ಭಾಷೆ ಮತ್ತು ಜನರ ಆಡುಭಾಷೆಯ ನಡುವೆ ವ್ಯತ್ಯಾಸವಿತ್ತು. ಮುಂಬೈ ಪ್ರಾಂತ್ಯದಲ್ಲಿ ಮರಾಠಿ, ಮದ್ರಾಸ್ ಪ್ರಾಂತ್ಯದಲ್ಲಿ ತಮಿಳು ಮತ್ತು ತೆಲುಗು, ಹೈದರಾಬಾದ್ ಪ್ರಾಂತ್ಯದಲ್ಲಿ ಉರ್ದು ಹಾಗೂ ಮೈಸೂರು ಸಂಸ್ಥಾನದಲ್ಲಿ ಕನ್ನಡ ಭಾಷೆಗೆ ಆಡಳಿತಾತ್ಮಕ ಪ್ರಾಮುಖ್ಯತೆ ಇತ್ತು ಎಂದು ವಿವರಿಸಿದರು.
ಕರ್ನಾಟಕ ಏಕೀಕರಣ ಚಳವಳಿಗೆ ಆಲೂರು ವೆಂಕಟರಾಯರು, ಹುಯಿಲಗೋಳ ನಾರಾಯಣರಾಯರು, ಹರ್ಡೇಕರ್ ಮಂಜಪ್ಪ, ಸಿದ್ದಪ್ಪ ಕಂಬಳಿ ಮತ್ತು ಆರ್.ಎಚ್. ದೇಶಪಾಂಡೆ ಸೇರಿದಂತೆ ಅನೇಕ ಮಹನೀಯರು ಮಹತ್ವದ ಕೊಡುಗೆ ನೀಡಿದ್ದಾರೆ. 1890ರಲ್ಲಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಸ್ಥಾಪನೆ, ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ನಡೆದ ಪ್ರಯತ್ನಗಳು ಹಾಗೂ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕನ್ನಡ ಭಾಷಿಕ ಪ್ರದೇಶಗಳ ಏಕೀಕರಣಕ್ಕಾಗಿ ವ್ಯಕ್ತವಾದ ಒತ್ತಾಯಗಳು ಚಳವಳಿಗೆ ಮಹತ್ವದ ತಿರುವು ನೀಡಿದವು ಎಂದು ತಿಳಿಸಿದರು.
ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ ಕನ್ನಡಿಗರಲ್ಲಿ ಏಕೀಕರಣದ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ ಹಾಗೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಮೈಸೂರು ಅರಸರು ಸೇರಿದಂತೆ ಅನೇಕ ಗಣ್ಯರು ನೀಡಿದ ಕೊಡುಗೆಗಳು ಏಕೀಕರಣದ ಆಶಯಕ್ಕೆ ಮತ್ತಷ್ಟು ಬಲ ತುಂಬಿದವು ಎಂದು ಹೇಳಿದರು.
1956ರ ನವೆಂಬರ್ 1ರಂದು ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ವಿಶಾಲ ಮೈಸೂರು ರಾಜ್ಯವನ್ನು ರಚಿಸಲಾಯಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ಬೆಳವಣಿಗೆಯ ಹಿಂದೆ ಅನೇಕ ಹೋರಾಟಗಾರರ ಪರಿಶ್ರಮ ಮತ್ತು ತ್ಯಾಗ ಅಡಗಿದೆ ಎಂದು ಸ್ಮರಿಸಿದರು.
ಕುಲಸಚಿವ ಪೆÇ್ರ. ಆರ್.ಆರ್. ಬಿರಾದಾರ್ ಅವರು ಮಾತನಾಡಿ, ಕರ್ನಾಟಕವು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮಗ್ರ ಅಭಿವೃದ್ಧಿ ಸಾಧಿಸಬೇಕಾಗಿದೆ. ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ, ಶಿಕ್ಷಣ ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ರಾಜ್ಯವು ಪ್ರಗತಿ ಹೊಂದಬೇಕು. ಪ್ರಧಾನಮಂತ್ರಿಯವರ ವಿಕಸಿತ ಭಾರತ 2047ರ ಕನಸಿನ ಸಾಕಾರದಲ್ಲಿ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದೆ. ರಾಜ್ಯ ಸರ್ಕಾರದ ಆಶಯದಂತೆ 2037ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ವಿಶ್ವವಿದ್ಯಾಲಯವು ಸುತ್ತಮುತ್ತಲಿನ ಗ್ರಾಮಗಳನ್ನು ದತ್ತು ಪಡೆದು ಸಂಶೋಧನೆ, ಶಿಕ್ಷಣ, ಸಮಾಜಸೇವೆ ಮತ್ತು ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಉತ್ತಮ ಅವಕಾಶ ಹೊಂದಿದೆ. ವಿಶ್ವವಿದ್ಯಾಲಯದ ವಿವಿಧ ಅಧ್ಯಯನ ವಿಭಾಗಗಳು ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸಂಶೋಧನೆ ನಡೆಸುವುದರ ಜೊತೆಗೆ ಗ್ರಾಮೀಣ ಜನರಿಗೆ ಶಿಕ್ಷಣ, ಉದ್ಯೋಗಾವಕಾಶ, ಸಣ್ಣ ಕೈಗಾರಿಕೆಗಳ ಸ್ಥಾಪನೆ ಮತ್ತು ಸ್ವಾವಲಂಬಿ ಬದುಕಿಗೆ ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಪ್ರಾದೇಶಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಂಚಾಲಕರಾದ ಡಾ. ಗಣಪತಿ ಬಿ. ಸಿನ್ನೂರು ಅವರು ಸ್ವಾಗತಿಸಿದರು. ಪೆÇ್ರ. ಪಾಂಡುರಂಗ ವಿ. ಪತ್ತಿ ಅವರು ವಂದನಾರ್ಪಣೆ ಮಾಡಿದರು. ಡಾ. ಸಫಿಯಾ ಪರ್ವಿನ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮವು ವಂದೇ ಮಾತರಂ ಮತ್ತು ನಾಡಗೀತೆ ಗಾಯನದೊಂದಿಗೆ ಆರಂಭಗೊಂಡಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಗೀತ ಮತ್ತು ಲಲಿತಕಲೆ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಪೆÇ್ರ. ಬಸವರಾಜ ಡೋಣೂರು, ಪೆÇ್ರ. ಚನ್ನವೀರ ಆರ್.ಎಂ., ಪೆÇ್ರ. ವಿಕ್ರಮ ವಿಸಾಜಿ, ಪೆÇ್ರ. ಜಿ.ಆರ್. ಅಂಗಡಿ, ಪೆÇ್ರ. ಎನ್. ಸತ್ಯನಾರಾಯಣ, ಪೆÇ್ರ. ಬಸವರಾಜ ಎಂ. ಕುಬಕಡ್ಡಿ, ಪೆÇ್ರ. ಶಿವಗಂಗಾ ರುಮ್ಮಾ, ಪೆÇ್ರ. ಮೊಹಮ್ಮದ್ ಜೊಹೇರ್, ಪೆÇ್ರ. ವಿಜಯಕುಮಾರ್, ಪೆÇ್ರ. ದೇವರಾಜಪ್ಪ, ಪೆÇ್ರ. ಜಯವೇಲ್ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.