
ಕಲಬುರಗಿ: ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳ ಕೆಲಸಕ್ಕಾಗಿ ಮತ್ತು ಬರಗಾಲ ಕಾಮಗಾರಿ ಆರಂಭಿಸಲು ಆಗ್ರಹಿಸಿ ಇಂದು ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿಯಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ ಕಠಾರೆ,ಮಲ್ಲಮ್ಮ ಕೋಡ್ಲಿ,ಪ್ರಭು ಪ್ಯಾರಾಬದ್ದಿ ಸೇರಿದಂತೆ ಹಲವರು ಪಾಲ್ಗೊಂಡರು.





















