Home ಜಿಲ್ಲೆ ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ; ಲೋಪದೋಷ ಕಂಡುಬAದರೆ ನಿರ್ದಾಕ್ಷಿಣ್ಯ ಕ್ರಮ

ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ; ಲೋಪದೋಷ ಕಂಡುಬAದರೆ ನಿರ್ದಾಕ್ಷಿಣ್ಯ ಕ್ರಮ

ಗದಗ,ನ.೬: ಸರ್ಕಾರಿ ನೌಕರರಿಗೆ ಸರಕಾರವು ಅನೇಕ ಸವಲತ್ತುಗಳನ್ನು ನೀಡಿದೆ ಅದರಲ್ಲಿ ಉತ್ತಮ ಜೀವನ ಸಾಗಿಸಬಹುದಾಗಿದೆ. ಆದರೆ ಕೆಲ ಅಧಿಕಾರಿಗಳು ಅತಿ ಆಸೆಗಾಗಿ ಭ್ರಷ್ಟಾಚಾರದಲ್ಲಿ ತೊಡಗುತ್ತಿರುವ ಕುರಿತು ದೂರಗಳು ಬಂದಿದ್ದು, ಭ್ರಷ್ಟಾಚಾರ ಸಾಬೀತಾದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ವಹಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗೆ ಅವರದೇ ಆದಂತಹ ಕಾರ್ಯಗಳನ್ನು ವರ್ಗೀಕರಣ ಮಾಡಿ ಕೊಡಲಾಗಿರುತ್ತದೆ. ಈ ಕಾರ್ಯ ಪರೀಶಿಲನೆಗಾಗಿ ಮೇಲುಸ್ತುವಾರಿಯನ್ನು ನೇಮಿಸಲಾಗಿದ್ದರೂ ಸಹ ಸರಕಾರಿ ಕಾರ್ಯಗಳು ಸುಗಮವಾಗಿ ಸಾಗುತ್ತಿಲ್ಲ. ಸಾರ್ವಜನಿಕರು ಒಂದೇ ಕೆಲಸಕ್ಕಾಗಿ ಪದೇ ಪದೇ ಕಚೇರಿಗೆ ಆಗಮಿಸುತ್ತಾರೆ ಎಂದರೆ ಕಚೇರಿಯಲ್ಲಿ ಕೆಲಸಗಳು ಸುಗಮವಾಗಿ ಸಾಗುತ್ತಿಲ್ಲ ಎಂದರ್ಥವಾಗುತ್ತದೆ ಎಂದರು.

ನಗರವನ್ನು ಸ್ವಚ್ಛವಾಗಿ ಇಡುವದು ಮುಖ್ಯವಾಗಿದೆ. ಗ್ರಾಮ ಮಟ್ಟದಿಂದ ನಗರ ಪ್ರದೇಶಗಳಲ್ಲಿ ಶೌಚಾಲಯಗಳು ಇಲ್ಲದೇ ಇರುವುದು ಕಂಡು ಬಂದಿದ್ದು, ಶೌಚಾಲಯ ನಿರ್ಮಾಣಕ್ಕೆ ಅನುದಾನ ಪಡೆದರೂ ಸಹ ಶೌಚಾಲಯ ನಿರ್ಮಿಸದೆ ಇರುವ ಕುರಿತು ಪರಿಶೀಲಿಸಿ ಕ್ರಮ ಜರುಗಿಸಲಾಗುವುದು.

ಜಿಲ್ಲೆಯಲ್ಲಿನ ತಹಶೀಲ್ದಾರ ಕಚೇರಿಗಳ ಆವರಣ ಸ್ವಚ್ಛತೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಇರುವುದು, ಅರ್ಜಿ ಸ್ವೀಕರಿಸುವ ಸಂಬAಧ ರೆಜಿಸ್ಟರಗಳು ಇಲ್ಲದೆ ಇರುವುದು ಪರಿಶೀಲನೆಯಲ್ಲಿ ಕಂಡು ಬಂದಿದ್ದು ರೋಣ ತಹಶೀಲ್ದಾರ ಕಚೇರಿಯಲ್ಲಿ ೨೧೯ ಆಡಿಟ್ ಆಕ್ಷೇಪಣೆಗಳಲ್ಲಿ ೨೦ ಆಕ್ಷೇಪಣೆಗಳಿಗೆ ಮಾತ್ರ ಅನುಪಾಲನಾ ವರದಿ ಸಲ್ಲಿಸಿರುವುದು ಕಂಡು ಬಂದಿರುತ್ತದೆ. ರೋಣ ತಾಲೂಕಿನ ಹತ್ತು ಗ್ರಾಮಗಳಲ್ಲಿ ಸ್ಮಶಾನ ಇಲ್ಲದೆ ಇರುವ ವಿಷಯಕ್ಕೆ ಸಂಬAಧಿಸಿದAತೆ ವಿವರಣೆ ಪಡೆದುಕೊಂಡರು. ತಹಶೀಲ್ದಾರ ಕಚೇರಿಯಲ್ಲಿ ಗುರುತಿಸಲಾದ ತಪುö್ಪಗಳು ಕುರಿತು ವಿವರಣೆ ನೀಡಬೇಕು ಇಲ್ಲವಾದಲ್ಲಿ ಅಧಿಕಾರಿಗಳು ತೊಂದರೆಗಿಡಾಗುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.

ಲೋಕಾಯುಕ್ತ ತಂಡವು ೧೩ ವಸತಿ ನಿಲಯಗಳಿಗೆ ಭೇಟಿ ನೀಡಿದ್ದು ವಸತಿ ನಿಲಯಗಳಲ್ಲಿ ವಿಧ್ಯಾರ್ಥಿಗಳ ಹಾಜರಾತಿಯಲ್ಲಿ ವ್ಯತ್ಯಾಸ ಕಂಡು ಬಂದಿರುತ್ತದೆ. ವಸತಿ ನಿಲಯಗಳಲ್ಲಿ ಸ್ವಚ್ಛತೆ ಇಲ್ಲದೆ ಇರುವುದು, ಶೌಚಾಲಯಗಳ ವ್ಯವಸ್ಥಿತ ನಿರ್ವಹಣೆ ಇಲ್ಲದೆ ಇರುವುದು ಕಂಡು ಬಂದಿದ್ದು ವರದಿ ನೀಡಲು ತಿಳಿಸಿದರು.

ರಾಜ್ಯದ ಸಾಕಷ್ಟು ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಸರಿಯಾಗಿಲ್ಲ. ಆದರೂ ಬೆರಳಣಿಕೆಯಷ್ಟು ಆಸ್ಪತ್ರೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಬಡ ಜನರಿಗೆ ಉಚಿತ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವಂತಹ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಶೋಚನೀಯವಾಗಿರುವದು ಕಳವಳಕಾರಿಯಾದ ಸಂಗತಿಯಾಗಿದೆ. ಲಕ್ಷೆ÷್ಮÃಶ್ವರ ಸರಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಸಿದರು.

ಡಂಬಳ ಗ್ರಾಮ ಪಂಚಾಯತಿಯಲ್ಲಿ ಮೂರು ವರ್ಷಗಳ ಹಿಂದೆ ಕಸ ಸಂಗ್ರಹಣೆಗೆ ಪ್ಲಾಸ್ಟಿಕ್ ಡಬ್ಬಿಗಳನ್ನು ಖರಿದಿಸಿ ಗ್ರಾಮಸ್ಥರಿಗೆ ವಿತರಿಸದೆ ಇಟ್ಟು ಕೊಂಡಿರುವುದು, ಬಹಿರ್ದೆಸೆ ಮುಕ್ತ ಗ್ರಾಮ ಎಂದು ಘೋಷಿಸಿದ್ದರು ಸಹ ಗ್ರಾಮದಲ್ಲಿ ಪೂರ್ಣ ಪ್ರಮಾಣದಲ್ಲಿ ಶೌಚಾಲಯಗಳು ಇಲ್ಲದೇ ಇರುವುದು ಹಾಗೂ ಅವುಗಳ ಬಳಕೆ ಮಾಡದೆ ಇರುವುದುನ್ನು ಪರಿಶೀಲಿಸಿ ಆಕ್ಷೇಪ ವ್ಯಕ್ತ ಪಡಿಸಿ ವರದಿ ನೀಡಲು ತಿಳಿಸಿದ ಅವರು , ಜಿಲ್ಲೆಯಲ್ಲಿ ೩೭೮ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ೧೧೯ ಘಟಕಗಳು ದುರಸ್ತಿಯಲ್ಲಿರುವುದನ್ನು ಗಂಭಿರವಾಗಿ ಪರಿಗಿಣಿಸಲಾಗುವುದು. ಇವುಗಳ ಪುನರ ಕಾರ್ಯಾರಂಭಕ್ಕೆ ತೆಗೆದುಕೊಳ್ಳಲಾದ ಕ್ರಮಗಳ ವಿವರ ಒದಗಿಸಲು ತಿಳಿಸಿದರು.

ಗಜೇಂದ್ರಗಡದ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯದ ಕೊರತೆ ಇರುವ ವರದಿ ನೋಡಿದ ನ್ಯಾಯಮೂರ್ತಿಗಳು ತೀವ್ರ ಕಳವಳ ವ್ಯಕ್ತಪಡಿಸಿ ಕೂಡಲೆ ಶೌಚಾಲಯಗಳ ನಿರ್ಮಾಣಕ್ಕೆ ಕೂಡಲೆ ಕ್ರಮ ವಹಿಸಬೇಕು. ಈ ವಿಷಯಕ್ಕೆ ಸಂಭAದಿಸಿದAತೆ ಹಿಂದಿನ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ತಿಳಿಸಿದರು. ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಆಪರೇಷನ್ ಶೌಚಾಲಯ ಕಾರ್ಯಕ್ರಮದಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಲು ತಿಳಿಸಿದರು.

ರೋಣ ತಾಲೂಕಿನ ಎರಡು ಆಹಾರ ಧಾನ್ಯ ಉಗ್ರಾಣಗಳಲ್ಲಿನ ಅಕ್ಕಿ,ಜೋಳ, ಗೋಧಿ ಧಾನ್ಯಗಳಿಗೆ ಹುಳು ಹಿಡಿದು, ಉಪಯೋಗಿಸಲು ಯೋಗ್ಯವಾಗದೆ ಇರುವುದು ಕಂಡು ಬಂದಿದ್ದು ಈ ಕುರಿತು ಪ್ರಕರಣ ದಾಖಲಿಸಲಾಗುವುದು.

ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದು, ಬೀಷ್ಮಕೆರೆ ಸುತ್ತ ಮುತ್ತಲು ಗಿಡ ಕಂಟೆಗಳು ಬೆಳೆದಿರುವುದು, ಸಮರ್ಪಕ ಕಸ ವಿಲೇವಾರಿ ಮಾಡದೆ ಇರುವುದು ಐತಿಹಾಸಿಕ ನಗರಕ್ಕೆ ಚ್ಯುತಿ ತರುವಂತಹ ಕಾರ್ಯವಾಗುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿ ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು. ೨೪೨೫ ಇ-ಸ್ವತ್ತು ಅರ್ಜಿಗಳು ಬಾಕಿ ಇರುವ ಕುರಿತು ಮಾಹಿತಿ ನೀಡಲು ತಿಳಿಸಿದರು.

ಜಿಲ್ಲೆಯಲ್ಲಿನ ಕೆರೆಗಳ ರಕ್ಷಣೆ ಹಾಗೂ ಸೂಕ್ತ ನಿರ್ವಹಣೆಯಾಗಬೇಕು. ಇವುಗಳ ಸೂಕ್ತ ನಿರ್ವಹಣೆ ಹಾಗೂ ರಕ್ಷಣೆ ಮಾಡುವದು ಸಂಬAಧಿಸಿದ ಅಧಿಕಾರಿಗಳ ಮೂಲಭೂತ ಕರ್ತವ್ಯವಾಗಿದೆ. ಅಲ್ಲದೇ ಕೆರೆ ಒತ್ತುವರಿಯನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿ ತೆರವಿಗೆ ಕ್ರಮವಹಿಸಲು ಸೂಚಿಸಿದರು.

ಸರಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅದಕ್ಕೆ ಸಾಕಷ್ಟು ಅನುದಾನವನ್ನು ಒದಗಿಸುತ್ತಿದೆ. ಸರಕಾರದ ಯೋಜನೆ ಹಾಗೂ ಅನುದಾನವನ್ನು ಸಮರ್ಪಕ ಹಾಗೂ ಪ್ರಾಮಾಣಿಕವಾಗಿ ಅರ್ಹರಿಗೆ ತಲುಪಿಸುವುದು ಎಲ್ಲ ಅಧಿಕಾರಿಗಳ ಕರ್ತವ್ಯ. ಒಂದು ವೇಳೆ ಅಧಿಕಾರಿ ಸಿಬ್ಬಂದಿಗಳು ಭ್ರಷ್ಟಾಚಾರ ನಡೆಸಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ವಹಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಲೋಕಾಯುಕ್ತ ಅಪರ ಉಪನಿಬಂಧಕರಾದ ಗಂಗಾಧರ್, ಆಪ್ತ ಕಾರ್ಯದರ್ಶಿ ಶ್ರೀನಾಥ ಕೆ, ಧಾರವಾಡ ಲೋಕಾಯುಕ್ತ ಪೋಲಿಸ್ ಅಧೀಕ್ಷಕರಾದ ಎಸ್.ಟಿ.ಸಿದ್ಧಲಿಂಗಪ್ಪ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಮಿಥುನ ಹೆಚ್.ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.