ಕಲಬುರಗಿ: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಮತ್ತು ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಮಿತಿ ಜಿಲ್ಲಾ ಅಧ್ಯಕ್ಷ ಸಚಿನ್ ಚವ್ಹಾಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಶಿನ್ ಪಟೇಲ್, ಶಿವಪುತ್ರ ಗರೂರು, ಶಿವರಾಜ ದೊಣ್ಣೂರ್, ದೇವಪ್ಪ ನೆಲೋಗಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.