
ಧಾರವಾಡ, ನ.೮: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಧಾರವಾಡ ಜಿಲ್ಲೆಯ ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ೨೦೨೬ ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಶಾಲಾ ಬ್ಯಾಂಡ್ ವಾದ್ಯ ನುಡಿಸುವ ಸ್ಪರ್ಧೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರ ಗ್ರಾಮದ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಆವರಣ ಹಾಗೂ ಮುಗದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಅತ್ಯಂತ ಉತ್ಸಾಹದಿಂದ ಜರುಗಿತು.
ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ೧೧ ತಂಡಗಳಿAದ ಸುಮಾರು ೪೫೦ ವಿದ್ಯಾರ್ಥಿಗಳು ಪಾಲ್ಗೊಂಡು ಪೈಪ್ ಬ್ಯಾಂಡ್ ಹಾಗೂ ಬ್ರಾಸ್ ಬ್ಯಾಂಡ್ ವಿಭಾಗಗಳಲ್ಲಿ ತಮ್ಮ ಅದ್ಭುತ ವಾದ್ಯಕೌಶಲ್ಯವನ್ನು ಪ್ರದರ್ಶಿಸಿದರು. ಪ್ರತಿಯೊಂದು ತಂಡದ ಪ್ರದರ್ಶನದಲ್ಲೂ ಶಿಸ್ತು, ಸಮನ್ವಯ, ಏಕಾಗ್ರತೆ ಹಾಗೂ ಸಾಮೂಹಿಕ ಪ್ರಯತ್ನದ ಸೊಬಗು ಎದ್ದು ಕಾಣುತ್ತಿತ್ತು. ವಿದ್ಯಾರ್ಥಿಗಳ ವಾದ್ಯಗಳ ನಿನಾದ ಕೇವಲ ಸಂಗೀತದ ಸಂಭ್ರಮವಾಗಿರದೆ, ಅವರ ಪರಿಶ್ರಮ ಮತ್ತು ಪ್ರತಿಭೆಯ ಅಭಿವ್ಯಕ್ತಿಯಾಗಿ ಮೂಡಿಬಂದಿತು.
ವಿಜೇತ ತಂಡಗಳ ಸಾಧನೆಗೆ ರಾಜ್ಯಮಟ್ಟದ ಅವಕಾಶ: ಬಾಲಕಿಯರ ಪೈಪ್ ಬ್ಯಾಂಡ್ ವಿಭಾಗದಲ್ಲಿ ಬೆಳಗಾವಿಯ ಕೇಂದ್ರೀಯ ವಿದ್ಯಾಲಯ ನಂ.೧ ಪ್ರಥಮ ಸ್ಥಾನ ಪಡೆದು ಗಮನ ಸೆಳೆಯಿತು.
ಬಾಲಕಿಯರ ಬ್ರಾಸ್ ಬ್ಯಾಂಡ್ ವಿಭಾಗದಲ್ಲಿ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಥಮ ಸ್ಥಾನ ಗಳಿಸಿದರೆ, ಕೇಂದ್ರೀಯ ವಿದ್ಯಾಲಯ ನಂ.೨ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಬಾಲಕರ ಬ್ರಾಸ್ ಬ್ಯಾಂಡ್ ವಿಭಾಗದಲ್ಲಿ ಬೆಳಗಾವಿ ಕ್ಯಾಂಪ್ನ ಸೇಂಟ್ ಪಾಲ್ಸ್ ಹೈಸ್ಕೂಲ್ ಪ್ರಥಮ ಸ್ಥಾನ ಗಳಿಸಿದರೆ, ಬೆಳಗಾವಿಯ ಭರತೇಶ್ ಸೆಂಟ್ರಲ್ ಸ್ಕೂಲ್ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಪ್ರಥಮ ಸ್ಥಾನ ಗಳಿಸಿದ ಮೂರು ತಂಡಗಳು ಇದೇ ನವೆಂಬರ್ ತಿಂಗಳಲ್ಲಿ ನಡೆಯ ಎಲಿ ರುವ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದು, ವಿಭಾಗದ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿವೆ.
ಪಠ್ಯದಾಚೆಗಿನ ಪ್ರತಿಭೆಗೆ ಶಿಕ್ಷಣ ಇಲಾಖೆಯ ಪ್ರೋತ್ಸಾಹ: ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ವಿದ್ಯಾರ್ಥಿಗಳ ಬ್ಯಾಂಡ್ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಲ್ಲಿ ಕಂಡುಬAದ ಶಿಸ್ತು, ಸಮಯಪ್ರಜ್ಞೆ ಮತ್ತು ತಂಡದ ಸಮನ್ವಯವನ್ನು ಪ್ರಶಂಸಿಸಿ ಪ್ರೋತ್ಸಾಹದಾಯಕವಾಗಿ ಮಾತನಾಡಿದರು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವೆ ಎಂಬ ಸಂದೇಶವನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಾಹಿತಿ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ನಾರಾಯಣ ಭಜಂತ್ರಿ ಬಹುಮಾನ ವಿತರಿಸಿ ಮಾತನಾಡಿ, “ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಲ್ಲ; ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದೂ ಶಿಕ್ಷಣದ ಪ್ರಮುಖ ಆಶಯವಾಗಿದೆ. ಬ್ಯಾಂಡ್ ವಾದ್ಯಗಳ ನುಡಿಸುವಿಕೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಪಾತ್ರವೂ ಮಹತ್ವದ್ದಾಗಿದೆ. ಒಬ್ಬರ ಲಯ ತಪ್ಪಿದರೂ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈ ಸ್ಪರ್ಧೆ ಮಕ್ಕಳಿಗೆ ಒಗ್ಗಟ್ಟು, ಶಿಸ್ತು, ಪರಸ್ಪರ ಗೌರವ, ನಾಯಕತ್ವ ಮತ್ತು ಸಾಮೂಹಿಕ ಜವಾಬ್ದಾರಿಯ ಮಹತ್ವವನ್ನು ಕಲಿಸುತ್ತದೆ. ಇಂದಿನ ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವವರಾಗದೆ, ಕಲೆ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡ ಸಮರ್ಥ ನಾಗರಿಕರಾಗಬೇಕು” ಎಂದು ಅಭಿಪ್ರಾಯಪಟ್ಟರು.




















