Home ಜಿಲ್ಲೆ ಹೆಲಿಕಾಪ್ಟರ್ ಅಪಘಾತ ಸಿಸಿಬಿ ಅಧಿಕಾರಿ ಅರುಣ ಸಾಳುಂಕೆ ದುರಂತ ನಿಧನ-ಕುಟುಂಬಸ್ಥರ ದುಃಖದಲ್ಲಿ ಭಾಗಿಯಾದ ಮಾಜಿ ಸಚಿವ...

ಹೆಲಿಕಾಪ್ಟರ್ ಅಪಘಾತ ಸಿಸಿಬಿ ಅಧಿಕಾರಿ ಅರುಣ ಸಾಳುಂಕೆ ದುರಂತ ನಿಧನ-ಕುಟುಂಬಸ್ಥರ ದುಃಖದಲ್ಲಿ ಭಾಗಿಯಾದ ಮಾಜಿ ಸಚಿವ ಶ್ರೀಮಂತ ಪಾಟೀಲ

ಅಥಣಿ : ಹೆಲಿಕಾಪ್ಟರ್ ಅಪಘಾತದಲ್ಲಿ ಕರ್ತವ್ಯನಿಷ್ಠ ಸಿಸಿಬಿ ಪೆÇಲೀಸ್ ಇನ್ಸ್‍ಪೆಕ್ಟರ್ ಅರುಣ್ ಸಾಳುಂಕೆ ಅವರ ಅಕಾಲಿಕ ದುರಂತ ನಿಧನಕ್ಕೆ ಮಾಜಿ ಸಚಿವ ಶ್ರೀಮಂತ ಪಾಟೀಲ ತೀವ್ರ ಸಂತಾಪ ವ್ಯಕ್ತಪಡಿಸಿ ತಾಲೂಕಿನ ಅರಟಾಳ ಗ್ರಾಮದಲ್ಲಿರುವ ಅವರ ಮನೆಗೆ ಭೇಟಿ ನೀಡಿ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಕರ್ತವ್ಯ ನಿರ್ವಹಣೆಯಲ್ಲಿದ್ದ ಒಬ್ಬ ನಿಷ್ಠಾವಂತ ಪೆÇಲೀಸ್ ಅಧಿಕಾರಿಯನ್ನು ಕಳೆದುಕೊಂಡಿರುವುದು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಕುಟುಂಬದ ಆಧಾರಸ್ತಂಭವಾಗಿದ್ದ ಅರುಣ್ ಸಾಳುಂಕೆ ಅವರ ಅಗಲಿಕೆಯಿಂದ ಉಂಟಾಗಿರುವ ನೋವು ಹೇಳತೀರದು. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕುಟುಂಬದವರು ಧೈರ್ಯ ಕಳೆದುಕೊಳ್ಳಬಾರದು. ಅಗಲಿದ ಅಧಿಕಾರಿಯ ಸೇವೆ ಹಾಗೂ ಕರ್ತವ್ಯಪರತೆಯನ್ನು ಸ್ಮರಿಸುತ್ತಾ, ಭಗವಂತನು ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀಮಂತ ಪಾಟೀಲ ಅವರು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮೃತರ ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಕಳೆದು, ಅವರ ನೋವಿನಲ್ಲಿ ತಾವೂ ಭಾಗಿಯಾಗಿರುವುದಾಗಿ ತಿಳಿಸಿದರು. ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸೇವೆ ಮತ್ತು ಸಮರ್ಪಣಾ ಮನೋಭಾವವನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ದುಃಖದ ಸಮಯದಲ್ಲಿ ಸಾಂತ್ವನದ ಮಾತುಗಳೊಂದಿಗೆ ಕುಟುಂಬದ ಬೆನ್ನಿಗೆ ನಿಂತ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ಭೇಟಿ ಮಾನವೀಯ ಕಾಳಜಿಗೆ ಸಾಕ್ಷಿಯಾಯಿತು.
ಈ ಸಂದರ್ಭದಲ್ಲಿ ಕೆಎಂಎಫ್ ಮಾಜಿ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ ಉಪಸ್ಥಿತರಿದ್ದರು.