
ಕಲಬುರಗಿ: ನಗರದ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ ಸಿಟಿಸಿ ಶಿಬಿರದಲ್ಲಿ ಶಿಬಿರಾರ್ಥಿಗಳಿಂದ ಗೋಡೆಗಳಿಗೆ ಸುಣ್ಣ ಬಳಿಯಲು ಹಚ್ಚಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರನ್ನು ಅಮಾನತ್ತು ಮಾಡುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ವೇದಿಕೆ ಜಿಲ್ಲಾಧ್ಯಕ್ಷ ಸಂದೀಪ ಭರಣಿ ಮತ್ತಿತರರಿದ್ದರು.





















