Home ಜಿಲ್ಲೆ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬಿ.ವಿ.ಬಿ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಚಿನ್ನದ ಪದಕ

ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬಿ.ವಿ.ಬಿ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಚಿನ್ನದ ಪದಕ

ಬೀದರ: ಬೀದರ ವಿಶ್ವವಿದ್ಯಾಲಯ ಬೀದರ ಆಯೋಜಿಸಿದ್ದ ಅಂತರ ಕಾಲೇಜುಗಳ ಪುರುಷ ಮತ್ತು ಮಹಿಳಾ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿನಿ ಕು:ಅಂಜಲಿ ತಂದೆ ಲಕ್ಷ್ಮಣ ಬಿ.ಎ.1ನೇ ಸೆಮಿಸ್ಟರನ ವಿದ್ಯಾರ್ಥಿನಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾಳೆ, ಈ ಸಾಧನೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಕಲಬುರಗಿ (ಬೀದರ) ಹಾಗೂ ಬಿ.ವಿ.ಬಿ. ಶಾಲಾ ಕಾಲೇಜು ಆವರಣದ ಸಂಚಾಲಕರಾದ ಡಾ. ರಜನೀಶ್ ಎಸ್.ವಾಲಿಯವರು, ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೀಪಾ ರಾಗ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶೇಷÀರಾವ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿಯ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.