
ಕಲಬುರಗಿ: ಸೆ.15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದೊಂದಿಗೆ 2026ರ "ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ"ಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಸಭೆಯಲ್ಲಿ ನಿರ್ಧರಿಸಲಾಯಿತು.ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಇದೇ ನವೆಂಬರ್ 27 ರಂದು ಶುಕ್ರವಾರ ಮಧ್ಯಾಹ್ನ 02 ಗಂಟೆಗೆ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಅರೇ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಂತ ಕವಿ ಕನಕದಾಸರ ಜಯಂತಿಯನ್ನು ಆಚರಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರಿ .ಎ. ನಾಸಿ ಅವರು ಪೆÇ್ರೀಟೋಕಾಲ್ ಪ್ರಕಾರ ಕಾರ್ಯಕ್ರಮ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ನಾಡಗೀತೆ, ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದುಟ ಎಂದರು.
ಈ ಸಂದರ್ಭದಲ್ಲಿ ಭಗವಂತರಾಯಗೌಡ. ಕೆ. ಪಾಟೀಲ
ಅವರನ್ನು ಜಯಂತಿಯ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ವೇದಿಕೆಯ ಮೇಲೆ ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಾವಿತ್ರಿ ಸಾಲಗಾರ , ಜಿಲ್ಲಾಧಿಕಾರಿ ಕಾರ್ಯಾಲಯ ತಹಶೀಲ್ದಾರ ಶಿವಪ್ರಕಾಶ ಹಿರೇಮಠ
ಸೇರಿದಂತೆ ಸಮಾಜದ ಮುಖಂಡರಾದ ಹಣಮಂತ ಪೂಜಾರಿ,ಸತೀಶ ಪೂಜಾರಿ,ತುಕ್ಕರಾಮ ನರೋಣ, ಗಣಪತಿ ಮಿಣಜಗಿ, ಗುಂಡಪ್ಪ ಇವಣಿ,ಸುರೇಖಾ ಪೂಜಾರಿ,ತಿಪ್ಪಣ್ಣ ಇದ್ದರು.





















