
ಕಲಬುರಗಿ, ನ. 15: ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾರತದ ಪ್ರಥಮ ಪ್ರಧಾನಮಂತ್ರಿಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜಯಂತಿ ಹಾಗೂ ಶರಣಬಸವೇಶ್ವರ ಮಹಾದಾಸೋಹ ಪೀಠದ ಎಂಟನೇಪೀಠಾಧಿಪತಿಗಳಾದ ವಿದ್ಯಾಭಂಡಾರಿ ಪೂಜ್ಯ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾ ಅವರ 92ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಖುಷಿ ಅರಳಿಮರ ಅವರು ಮಕ್ಕಳ ದಿನಾಚರಣೆಯ ಮಹತ್ವ ಹಾಗೂಪಂಡಿತ್ ಜವಾಹರಲಾಲ್ ನೆಹರು ಅವರ ಜೀವನ, ಆದರ್ಶಗಳು ಮತ್ತು ಮಕ್ಕಳ ಮೇಲಿನ ಪ್ರೀತಿಯ ಕುರಿತು ಮಾತನಾಡಿದರು. ನೆಹರುಅವರು ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳೆಂದು ಪರಿಗಣಿಸಿ, ಶಿಕ್ಷಣ, ವೈಜ್ಞಾನಿಕ ಮನೋಭಾವ ಹಾಗೂ ರಾಷ್ಟ್ರ ನಿರ್ಮಾಣಕ್ಕೆಹೆಚ್ಚಿನ ಆದ್ಯತೆ ನೀಡಿದ ಮಹಾನ್ ನಾಯಕರು ಎಂದು ತಿಳಿಸಿದರು. ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಜವಾಬ್ದಾರಿಯುತ ನಾಗರಿಕರಾಗಿ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಇನ್ನೋರ್ವ ವಿದ್ಯಾರ್ಥಿನಿ ಸೃಷ್ಟಿ ಅವರು ವಿದ್ಯಾಭಂಡಾರಿ ಪೂಜ್ಯ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾ ಅವರ
ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿಗೆನಾಂದಿ ಹಾಡಿದ ಪೂಜ್ಯ ಅಪ್ಪಾಜಿಯವರು 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ, ಬಡ ಹಾಗೂಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಕಲ್ಪಿಸಿದರು. ಶರಣಬಸವ ವಿಶ್ವವಿದ್ಯಾಲಯದ ಸ್ಥಾಪನೆಯ ಮೂಲಕ ಉನ್ನತಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದರು. ಅವರ ಬದುಕು ಜ್ಞಾನ, ಭಕ್ತಿ, ಕಾಯಕ, ದಾಸೋಹ ಹಾಗೂ ಮಾನವೀಯ ಸೇವೆಯಅಪೂರ್ವ ಸಂಗಮವಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಇಬ್ಬರು ಮಹಾನ್ ಚೇತನಗಳ ಜೀವನಾದರ್ಶಗಳನ್ನು ಸ್ಮರಿಸಲಾಯಿತು. ಪಂಡಿತ್ ಜವಾಹರಲಾಲ್ ನೆಹರುಅವರು ರಾಷ್ಟ್ರದ ಭವಿಷ್ಯವನ್ನು ಶಿಕ್ಷಣದ ಮೂಲಕ ರೂಪಿಸುವ ಕನಸು ಕಂಡರೆ, ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರುಶಿಕ್ಷಣದ ಮೂಲಕ ಕಲ್ಯಾಣ ಕರ್ನಾಟಕದ ಸಮಾಜದ ಉನ್ನತಿಗಾಗಿ ತಮ್ಮ ಬದುಕನ್ನೇ ಸಮರ್ಪಿಸಿದರು. ವಿದ್ಯಾರ್ಥಿಗಳು ಜ್ಞಾನಸಂಪಾದನೆಯೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು, ವಿನಯ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆಮಾದರಿಯಾಗಬೇಕು ಎಂಬ ಸಂದೇಶವನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.





















