Home ಜಿಲ್ಲೆ ಮೈಸೂರು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ: ಪ್ರಕರಣ ದಾಖಲು

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ: ಪ್ರಕರಣ ದಾಖಲು

ಸಂಜೆವಾಣಿ ನ್ಯೂಸ್
ಮೈಸೂರು: ನ.16:-
ಜೆಪಿ ನಗರದ ಕವಿತಾ ಬೇಕರಿ ಸರ್ಕಲ್ ಬಳಿ ಯುವಕನೊಬ್ಬನ ಮೇಲೆ ಗುಂಪೆÇಂದು ಮಾರಣಾಂತಿಕ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ವಿದ್ಯಾರಣ್ಯಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲಿ ನಿಂತಿದ್ದ ಯುವತಿಯ ಚೈನ್ ಕಿತ್ತುಕೊಳ್ಳಲು ಯುವಕರ ಗುಂಪೆÇಂದು ಯತ್ನಿಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಸ್ಥಳದಲ್ಲಿ ಇದ್ದ ಯುವಕನೊಬ್ಬ ಪ್ರಶ್ನಿಸಿದಾಗ, ಆತನ ಮೇಲೆ ಗುಂಪು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ.
40 ರಿಂದ 50 ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹಲ್ಲೆಯಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೆÇಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರಣ್ಯಪುರಂ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.