Home ಜಿಲ್ಲೆ ಕಲಬುರಗಿ ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು

ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು

ಕಲಬುರಗಿ,ನ.19:ಸಹಕಾರ ಕ್ಷೇತ್ರ ಮತ್ತು ಸಂಘಗಳ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಲಾಡ್ ಚಿಂಚೋಳಿ ಗ್ರಾಮ ಪಂಚಾಯತ್ ಸದಸ್ಯೆ ತಂಗ್ಯಮ್ಮ ಕಟ್ಟಿಮನಿ ಅಭಿಪ್ರಾಯಪಟ್ಟರು.
ಬುಧವಾರ ಕಲಬುರಗಿ ತಾಲೂಕಿನ ಲಾಡ್ ಚಿಂಚೋಳಿ ಗ್ರಾಮದಲ್ಲಿ 73ನೇ ಸಹಕಾರ ಸಪ್ತಾಹ ಕಾರ್ಯಕ್ರಮವು ಗ್ರಾಮದ ಮಹಿಳಾ ಹಾಲು ಉತ್ಪಾದಕ ಸಹಕಾರ ಸಂಘ ನಿಯಮಿತ ಸಹಕಾರದೊಂದಿಗೆ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ಪ್ರತಿನಿತ್ಯವು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಲಬುರಗಿ-ಬೀದರ್ ಹಾಗೂ ಯಾದಗಿರಿ ಒಕ್ಕೂಟದ ನಿರ್ದೇಶಕ ಈರಣ್ಣ ಜಳಕಿ ಇವರು ಮಾತನಾಡುತ್ತಾ, ಸಹಕಾರ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಮಾಡಿದಲ್ಲಿ ಮಾತ್ರ ಜನರ ಜೀವನದಲ್ಲಿ ಬದಲಾವಣೆ ಜತೆಗೆ ಆರ್ಥಿಕ ಚೇತರಿಕೆ ಕಾಣಲು ಸಾಧ್ಯವಾಲಿದೆ ಎಂದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ನಾಗಮಣಿ ಬಿರಾದರ್ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷರಾದ ಶಿವಾಜಿ ಸೂರ್ಯವಂಶ ಹಾಗೂ ಮಹಿಳಾ ಹಾಲು ಉತ್ಪಾದಕ ಸಹಕಾರ ಸಹಕಾರ ಸಂಘದ ಉಪಾಧ್ಯಕ್ಷರಾದ ಮೀನಾಕ್ಷಿ ಪಾಟೀಲ್, ಗ್ರಾಮ ಪಂಚಾಯತಿ ಸದಸ್ಯರಾದ ಶಂಕರ ಪಾಟೀಲ್ ಹಾಗೂ ಹಿರಿಯ ಮುಖಂಡರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.