Home ಜಿಲ್ಲೆ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ


ರಬಕವಿ ಬನಹಟ್ಟಿ,ನ.೧೯:
ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವುದು ಬಹಳ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಹೇಳಿದರು.


ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ೨೦೨೬-೨೭ನೇ ಸಾಲಿನ ರಬಕವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ, ಜಮಖಂಡಿ, ಸಮೂಹ ಸಂಪನ್ಮೂಲ ಕೇಂದ್ರ ರಬಕವಿ, ಎಂ.ವ್ಹಿ ಪಟ್ಟಣ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಹಾಗೂ ಟಿ.ಇ.ಎಸ್. ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ರಬಕವಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕöÈತಿಕ, ಸಾಹಿತ್ಯಿಕ ಹಾಗೂ ಕಲಾತ್ಮಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಹಾಡುಗಾರಿಕೆ, ಭಾಷಣ, ಕವನ ವಾಚನ, ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳು ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾದವು.


ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿ ಕಲೆ, ಸಾಹಿತ್ಯ, ಸಂಸ್ಕöÈತಿ ಹಾಗೂ ಸೃಜನಶೀಲ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ ಎಂಬ ಆಶಯ ವ್ಯಕ್ತಪಡಿಸಲಾಯಿತು.


ಇದೇ ಸಂದರ್ಭದಲ್ಲಿ ಬಸವರಾಜ ಯಂಡಿಗೇರಿ. ಬಿ ಆರ್ ಹಣಗಂಡಿ. ಸತೀಶ್ ತಳವಾರ. ಎಸ್ ಎಂ ಬೆಳಗಲಿ. ಪ್ರಶಾಂತ್ ಹೊಸಮನಿ. ಬಿ ಮುಧೋಳ. ಯು ಎಸ್ ಹಲಕುರ್ಕಿ. ಎಂ ಎಸ್ ಗಡನ್ನವರ
ಶಿವಕುಮಾರ್ ಕೋಕಟ್ನೂರ.
ಬಿ ದಿ ಲೋಕಪುರ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.