
ಸಂಜೆವಾಣಿ ವಾರ್ತೆ
ಬಳ್ಳಾರಿ, ನ. ೨೭: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ, ವ್ಯಾಪಾರ -ವಾಣಿಜ್ಯೋದ್ಯಮದ ಅಭಿವೃದ್ಧಿಗಾಗಿ ಎಫ್ಕೆಸಿಸಿಐಗೆ ಸಲ್ಲಿಸಿರುವ ಎಲ್ಲಾ ಮನವಿಗಳನ್ನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ತಲುಪಿಸಿ, ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಎಫ್ಕೆಸಿಸಿಐ ಉಪಾಧ್ಯಕ್ಷ ಸತೀಶ್ ಎನ್. ರಾಜ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಎಫ್ಕೆಸಿಸಿಐ ಉಪಾಧ್ಯಕ್ಷರಾದ ಸತೀಶ್ ಎನ್. ರಾಜ್ ಹಾಗೂ ತಂಡಕ್ಕೆ ಶುಕ್ರವಾರ ಸಲ್ಲಿಸಿದ ಅಭಿನಂದನೆಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು, ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸೇರಿ ಪ್ರಮುಖ ಬೇಡಿಕೆಗಳಾದ ಒಣ ಮೆಣಸಿನಕಾಯಿ ಮಾರುಕಟ್ಟೆ, ವಿಮಾನ ನಿಲ್ದಾಣ, ಕೈಗಾರಿಕಾ ಪ್ರದೇಶಕ್ಕಾಗಿ ಪ್ರತ್ಯೇಕ ಅಗ್ನಿಶಾಮಕ ಠಾಣೆ ಸೇರಿ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಎಫ್ಕೆಸಿಸಿಐ ಸರ್ಕಾರದ ಮಟ್ಟದಲ್ಲಿ ಪ್ರಭಾವಬೀರಬೇಕು ಎಂದು ಕೋರಿದರು.
ಆಗ, ಎಫ್ಕೆಸಿಸಿಐ ಉಪಾಧ್ಯಕ್ಷ ಸತೀಶ್ ಎನ್. ರಾಜ್ ಅವರು, ಎಫ್ಕೆಸಿಸಿಐ ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಪ್ರಭಾವಿಯಾಗಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅನೇಕ ಮನವಿಗಳನ್ನು ಸರ್ಕಾರದ ಮಟ್ಟದಲ್ಲಿ ತಲುಪಿಸಿ, ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದೆ ಎಂದು ಹೇಳಿದರು.
ಎಫ್ಕೆಸಿಸಿಐನ ಕಾರ್ಯಕಾರಿ ಸಮಿತಿ ಸದಸ್ಯರು. ಸಿಎ ಆಗಿರುವ ರಾಜೇಶ್, ಶಿವಮೊಗ್ಗ ಚೇಂಬರ್ ಆಫ್ ಕಾರ್ಸ್ನ ಮಾಜಿ ಅಧ್ಯಕ್ಷರಾದ ಶಂಕರಣ್ಣ, ಗೌರವ ಕಾರ್ಯದರ್ಶಿಗಳಾದ ಎ.ಎಂ. ಸುರೇಶ್, ಉಪಾಧ್ಯಕ್ಷರಾದ ಜಿ. ವಿಜಯಕುಮಾರ್, ಖಜಾಂಚಿಗಳಾದ ಆರ್. ಮನೋಹರ್, ದಾವಣಗೆರೆಯ ಮುಕ್ಕಣ್ಣ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ್ ಹಾಗೂ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಹಾಗೂ
ವಿ. ರಾಮಚಂದ್ರ, ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



















