Home ಜಿಲ್ಲೆ ಅ.೨೩ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ:ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ

ಅ.೨೩ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ:ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ


ಧಾರವಾಡ,ಸೆ.೨೭:ಕರ್ನಾಟಕ ವಿಧಾನ ಪರಿ?Àತ್ತಿನ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ಅಕ್ಟೋಬರ್ ೨೩ ರಂದು ಮತದಾನ ನಡೆಯಲಿದೆ ಎಂದು ಕರ್ನಾಟಕ ಪಶ್ಚಿಮ ಪದವಿ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ ಕುರಿತು ಸಭೆ ಜರುಗಿಸಿ, ಮಾತನಾಡಿದರು.


ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ ೨೯ ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ ೬ ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ ೭ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ ೯ ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಕ್ಟೋಬರ್ ೨೩ ರಂದು ಬೆಳಿಗ್ಗೆ ೮ ರಿಂದ ಸಂಜೆ ೪ ರವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ ೨೭ ರಂದು ಮತ ಎಣಿಕೆ ನಡೆಯಲಿದ್ದು, ಅಕ್ಟೋಬರ್ ೩೧ ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.


ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಒಳಗೊಂಡಿವೆ. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಮತದಾರರು ೨೦೨೫ ರ ಡಿಸೆಂಬರ್ ೩೦ ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ಕ್ಷೇತ್ರದಲ್ಲಿ ೫೧,೫೯೯ ಪುರು?Àರು, ೩,೬೮೮ ಮಹಿಳೆಯರು ಸೇರಿದಂತೆ ಒಟ್ಟು ೮೮,೦೮೭ ಮತದಾರರು ಇದ್ದಾರೆ. ನಿರಂತರ ಮತದಾರರ ಪಟ್ಟಿ ಪರಿ?À್ಕರಣೆಯ ಅವಧಿಯಲ್ಲಿ ಹೆಚ್ಚುವರಿಯಾಗಿ ೨,೫೪೦ ಮತದಾರರು ನೋಂದಾಯಿತರಾಗಿದ್ದಾರೆ.


ಧಾರವಾಡ ಜಿಲ್ಲೆಯಲ್ಲಿ ೫೪, ಗದಗದಲ್ಲಿ ೨೩, ಹಾವೇರಿಯಲ್ಲಿ ೨೮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ೨೩ ಸೇರಿದಂತೆ ಒಟ್ಟು ೧೨೮ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.
ನಾಮಪತ್ರ ಸಲ್ಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರದೊಂದಿಗೆ ೧೦ ಸೂಚಕರ ಸಹಿ ಸಲ್ಲಿಸಬೇಕು. ಅಭ್ಯರ್ಥಿಯ ವಯಸ್ಸು ೩೦ ವ?Àðಕ್ಕಿಂತ ಕಡಿಮೆ ಇರಬಾರದು ಹಾಗೂ ಕರ್ನಾಟಕದ ಯಾವುದೇ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು. ಅಭ್ಯರ್ಥಿಯು ಯಾವುದೇ ಕಾನೂನಿನಡಿ ಅನರ್ಹರಾಗಿರಬಾರದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.೧೦,೦೦೦ ಹಾಗೂ ಪರಿಶಿ?À್ಟ ಜಾತಿ ಮತ್ತು ಪರಿಶಿ?À್ಟ ಪಂಗಡದ ಅಭ್ಯರ್ಥಿಗಳು ರೂ. ೫,೦೦೦ ಠೇವಣಿ ಇಡಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಂಪೂರ್ಣವಾಗಿ ಸಲ್ಲಿಸಬೇಕು. ನಾಮಪತ್ರ ಸಲ್ಲಿಕೆ ಮತ್ತು ಸಂಬAಧಿಸಿದ ನಮೂನೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದಾಗಿದೆ. ನಿಗದಿತ ಅವಧಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು ಎಂದು ಹೇಳಿದರು.
ಮತ ಎಣಿಕೆ ಕೇಂದ್ರವನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ (ಒಅಒಅ) ರಚಿಸಲಾಗಿದೆ. ಈ ಚುನಾವಣೆಯಲ್ಲಿ ಮತಪತ್ರಗಳ ಮೂಲಕ ಮತದಾನ ನಡೆಯಲಿದ್ದು, ಓಔಖಿಂ (ಮೇಲಿನ ಯಾರೂ ಅಲ್ಲ) ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್.ಆರ್., ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಪ್ರಕಾಶ್ ಹಳಿಯಾಳ, ರೇವಣಸಿದ್ದಪ್ಪ ಹೊಸಮನಿ, ಸಿದ್ದು ಕಲ್ಯಾಣಶೆಟ್ಟಿ, ದೇವರಾಜ ಕಂಬಳಿ, ಹುಸೇನ್ ಬಾ?Á ತಳೇವಾಡ ಉಪಸ್ಥಿತರಿದ್ದರು.