ಕಲಬುರಗಿ,ಮೇ.19-ಚರಂಡಿ ನೀರಿನಲ್ಲಿ ಶವ ತೇಲಿ ಬಂದಿರುವ ಘಟನೆ ನಗರದ ಬಸವೇಶ್ವರ ಕಾಲೋನಿಯಲ್ಲಿ ನಡೆದಿದೆ.
40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಚರಂಡಿ ನೀರಿನಲ್ಲಿ ತೇಲಿ ಬಂದಿದ್ದು, ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. 2-3 ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದು. ರಭಸವಾಗಿ ಮಳೆಯಾಗಿದ್ದರಿಂದ ಚರಂಡಿ ನೀರಿನಲ್ಲಿ ಶವ ತೇಲಿ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಎಂ.ಡಿ.ಇಮ್ರಾನ್ ಎಂಬುವವರು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆ ನಡೆದಿದೆ.