Home ಜಿಲ್ಲೆ ಕಲಬುರಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆತೃತ್ವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಮಹತ್ವದ ಸಭೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೆತೃತ್ವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಮಹತ್ವದ ಸಭೆ

ಕಲಬುರಗಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಜರುಗಿತು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳು, ಇಲಾಖೆಯ ಚಟುವಟಿಕೆಗಳು ಹಾಗೂ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಸರ್ಕಾರದ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಹಾಗೂ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಮಾಜಿ ಸಚಿವ ರಹೀಂ ಖಾನ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಹಾಫಿಜ್ ಡಾ. ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಲ್ತಾಫ್ ಖಾನ್, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪೆÇ್ರಫೆಸರ್ ಜಾಫರ್, ಹಜ್ ಸಮಿತಿಯ ಅಧ್ಯಕ್ಷ ಜುಲ್ಫಿಕಾರ್ ಅಹ್ಮದ್ ಖಾನ್ ಟಿಪ್ಪು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಆತೀಕ್, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.