
ಲಕ್ಷೆö್ಮÃಶ್ವರ,ಜೂ.೩೦: ಮುಂಗಾರು ಪ್ರಾರಂಭದ ರೈತರ ಮೊದಲ ಹಬ್ಬ ಕಾರಹುಣ್ಣಿಮೆಯನ್ನು ರೈತ ಸಮುದಾಯ ಸೋಮವಾರ ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು. ಸಂಪ್ರದಾಯದAತೆ ಹುಲಗೇರಿಬಣದಲ್ಲಿ ಪಾಟೀಲಕುಲಕರ್ಣಿ ಮನೆತನದವರು ನಂದೆಣ್ಣವರ ಕುಟುಂಬದವರಿಗೆ ಕರಿ ಕಟ್ಟಲು ಕೊಡುವರು, ಸೊಪ್ಪಿನಕೇರಿ ಓಣಿಯ ಹಿರಿಯರು ಕರಿ ಹರಿಯುವ ಹಬ್ಬಕ್ಕೆ ಚಾಲನೆ ನೀಡುವ ಸಂಪ್ರದಾಯ ನೆರವೇರಿಸಿದರು.
ಗೋಧೂಳಿ ಸಮಯದಲ್ಲಿ ವಿಶೇಷವಾಗಿ ಅಲಂಕಾರ ಮಾಡಿದ ಎತ್ತು, ಹೋರಿಗಳನ್ನು ರೈತರು ಊರ ಅಗಸಿ ರಸ್ತೆಯಲ್ಲಿ ಓಡಿಸುತ್ತಾ ಅದರ ಹಿಂದೆ ತಾವೂ ಓಡಿ ಸಂತಸ ಪಟ್ಟರು.
À ಪಟ್ಟಣದ ಆರಾಧ್ಯದೈವ ಸೋಮೇಶ್ವರನ ಸನ್ನಿಧಿಯಲ್ಲಿ ಗಿರೀಶ ಅಣ್ಣಿಗೇರಿಯವರ ಎತ್ತುಗಳು ಕರಿ ಹರಿದವು. ಎತ್ತುಗಳನ್ನು ಓಡಿಸುವ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ರೈತರು, ಯುವಕರು, ಮಕ್ಕಳು ಸೇರಿದ್ದರು. ಕರಿ ಹರಿದ ಎತ್ತುಗಳ ಜತೆ ನೂರಾರು ಎತ್ತುಗಳನ್ನು ಸೇರಿಸಿ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾಧ್ಯವೈಭವದೊಂದಿಗೆ ಮೆರವಣಿಗೆ ಮಾಡಲಾಯಿತು. ಈ ವೇಳೆ ಮಳೆರಾಯನ ಆಗಮನ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿತು.
ಈ ಸಂದರ್ಭದಲ್ಲಿ ಗುರುರಾಜ ಪಾಟೀಲಕುಲಕರ್ಣಿ, ಚನ್ನಪ್ಪ ಜಗಲಿ, ಶಿವಯೋಗಿ ಅಂಕಲಕೋಟಿ, ಚಂದ್ರಣ್ಣ ಮೆಕ್ಕಿ, ಚನ್ನಪ್ಪ ಚಿಂಚಲಿ, ಬಸವರಾಜ ಮೆಣಸಿನಕಾಯಿ, ವಿರುಪಾಕ್ಷ ಆದಿ, ಅಪ್ಪಣ್ಣ ಮುಳಗುಂದ, ಮಯೂರಗೌಡ ಪಾಟೀಲ, ನಂದೀಶ ಬಂಡಿವಾಡ, ರಾಮಣ್ಣ ಗೌರಿ, ಸೋಮಣ್ಣ ಸುತಾರ, ಸುರೇಶ ಚೌಕನವರ, ಸೋಮಣ್ಣ ಉಮಚಗಿ, ಸುರೇಶ ರಾಚನಾಯ್ಕರ, ಮುತ್ತಣ್ಣ ಕಟ್ಟಿಗೌಡ್ರ , ಗಂಗಪ್ಪ ಮೇವುಂಡಿ, ಈರಪ್ಪ ಗುಡಗೇರಿ, ಬಸವರಾಜ ಅಣ್ಣಿಗೇರಿ, ಬಸವರಾಜ ಆದಿ, ರಮೇಶ ಹೆಬ್ಬಾಳ ಸೇರಿ ರೈತ ಮುಖಂಡರಿದ್ದರು.
























