Home ಜಿಲ್ಲೆ ಕಲಬುರಗಿ ಸಯ್ಯದ್ ಅಕ್ಬರ್ ಹುಸೈನಿ ಪಿಯು ಕಾಲೇಜಿನಲ್ಲಿ ಸಂಭ್ರಮದ ರಾಜ್ಯೋತ್ಸವ ಕಲರವ

ಸಯ್ಯದ್ ಅಕ್ಬರ್ ಹುಸೈನಿ ಪಿಯು ಕಾಲೇಜಿನಲ್ಲಿ ಸಂಭ್ರಮದ ರಾಜ್ಯೋತ್ಸವ ಕಲರವ

ಕಲಬುರಗಿ: ಸಯ್ಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ” ಕಲರವ-2026″ ಕಾರ್ಯಕ್ರಮವನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಫಿರೋಜ್ ಅವರು ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎನ್ ಎಸ್. ಎಸ್. ಅಧಿಕಾರಿ ಡಾ. ಉಮರ್ ಫಾರೂಕ್ ಮೀರನಾಯಕ ಅವರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕನ್ನಡ ಶಾಲು ಹೊದಿಸಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಕರ್ನಾಟಕ ಏಕೀಕರಣ ಚಳವಳಿಯ ಇತಿಹಾಸ ಹಾಗೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಕರ್ನಾಟಕದ ಅಭಿವೃದ್ಧಿಗೆ ಮುಸ್ಲಿಮರು ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಚಾರ್ಯರಾದ ಡಾ. ಫಿರೋಜ್ ಅವರು ಕನ್ನಡ ರಾಜ್ಯೋತ್ಸವದ ಮಹತ್ವವನ್ನು ವಿವರಿಸಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪ್ರೊ. ರಾಜಾ ಸಾಬ್ ಅವರ ಸೇವೆಯನ್ನು ಸ್ಮರಿಸಿದರು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಡಾ. ಉಮರ್ ಫಾರೂಕ್ ಮೀರನಾಯಕ ಅವರ ನಿರ್ದೇಶನದಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು “ಕನ್ನಡ ಬಳಸಿ, ಕನ್ನಡ ಉಳಿಸಿ” ಎಂಬ ಸಂದೇಶ ಸಾರುವ ನಾಟಕವನ್ನು ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಕಾಲೇಜಿನ ಎನ್ ಎಸ್ ಎಸ್ ತಂಡ ಯಶಸ್ವಿಯಾಗಿ ಆಯೋಜಿಸಿತು. ಈ ಸಂದರ್ಭದಲ್ಲಿ ಕಾಲೇಜಿನ ಎನ್ ಎಸ್ ಎಸ್ ವಿಭಾಗದ ಉಪನ್ಯಾಸಕ ನಾಗರಾಜ ಹಿರೇಗೌಡರ್ ಸೇರಿದಂತೆ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.