
ನವಲಗುಂದ,ಮಾ20 : ಭಾರತಮಾತೆಯ ಸ್ತಬ್ಧ ಚಿತ್ರದೊಂದಿಗೆ ಯುಗಾದಿ ಹಬ್ಬದ ಭವ್ಯ ಶೋಭಾಯಾತ್ರೆ ಅದ್ಧೂರಿಯಾಗಿ ನೆರವೇರಿತು.
ಪಟ್ಟಣದ ಗಾಂಧಿ ಮಾರುಕಟ್ಟೆ, ಗ್ರಾಮ ಚಾವಡಿ, ಕಳ್ಳಿಮಠ, ಲಿಂಗರಾಜ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆ ಯುದ್ದಕ್ಕೂ ಯುವಕರು ಕುಣಿದು ಸಂಭ್ರಮಿಸಿದರು.
ಇದಕ್ಕೂ ಮೊದಲು ಪಟ್ಟಣದ ಹೃದಯಭಾಗವಾಗಿರುವ ಶ್ರೀ ಗಣಪತಿ ದೇವಸ್ಥಾನದ ಮುಂಭಾಗ ಶಾಸಕ ಎನ್.ಎಚ್.ಕೋನರೆಡ್ಡಿ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ, ಬಿಜೆಪಿ ಮುಖಂಡ ದೇವರಾಜ ದಾಡಿಭಾವಿ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಶೋಭಾಯಾತ್ರೆಗೆ ಸಾಮೂಹಿಕ ಚಾಲನೆ ನೀಡಿದರು.






















